ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ರೋಟರಿ ಬಾಲ ಭವನ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಜಾಹೀರಾತು
ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಎಸೋಸಿಯೇಶನ್ ನಿಯಮಾವಳಿ ಪ್ರಕಾರ ಕಬಡ್ಡಿ ಪಂದ್ಯಾಟ ನಡೆಸಲಾಗುತ್ತಿದ್ದು, ಕಬಡ್ಡಿ ಸಂಘಟಕರು, ಆಟಗಾರರು ಸಹಕರಿಸಬೇಕು ಎಂದು ಹೇಳಿದರು.
ಎಸೋಸಿಯೇಶನ್ ಜಿಲ್ಲಾ ಸಮಿತಿ ಪ್ರ.ಕಾರ್ಯದರ್ಶಿ ಉದಯ ಕುಮಾರ್ ಚೌಟ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.ಬಂಟ್ವಾಳ ಕಬಡ್ಡಿ ಎಸೋಸಿಯೇಶನ್ ಕಾರ್ಯಾಧ್ಯಕ್ಷ ಪುಷ್ಪರಾಜ ಚೌಟ,ಪೋಷಕ ಮಂಜುನಾಥ ಆಚಾರ್ಯ, ಉಪಾಧ್ಯಕ್ಷರಾದ ರಮಾನಾಥ ವಿಟ್ಲ, ಬಾಲಕೃಷ್ಣ ನರಿಕೊಂಬು, ಬಾಬು ಮಾಸ್ಟರ್ ತುಂಬೆ, ಲೋಕನಾಥ ಶೆಟ್ಟಿ ಬಿ.ಸಿ.ರೋಡ್, ತೀರ್ಪುಗಾರರ ಮಂಡಳಿ ಅಧ್ಯಕ್ಷ ಸುರೇಶ್ ಮೈರಡ್ಕ, ಎಸೋಸಿಯೇಶನ್ ಸದಸ್ಯರು, ಕಬಡ್ಡಿ ತಂಡದ ಆಟಗಾರರು , ಕಬಡ್ಡಿ ಪಂದ್ಯಾಟದ ಸಂಘಟಕರು ಉಪಸ್ಥಿತರಿದ್ದರು. ಕೋಶಾಧಿಕಾರಿ ಉಮಾನಾಥ ರೈ ಮೇರಾವು ಅವರು ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಚಂದ್ರಶೇಖರ ಕರ್ಣ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನಿಯಮಾವಳಿ ಪ್ರಕಾರವೇ ಕಬಡ್ಡಿ ಪಂದ್ಯಾಟ: ಎಸೋಸಿಯೇಶನ್ ಮನವಿ"
Be the first to comment on "ನಿಯಮಾವಳಿ ಪ್ರಕಾರವೇ ಕಬಡ್ಡಿ ಪಂದ್ಯಾಟ: ಎಸೋಸಿಯೇಶನ್ ಮನವಿ"