ಪಂಚಾಯತ್ ರಾಜ್, ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಹಾಗೂ ಪಂಚಾಯತ್ ಅಧಿಕಾರಿಗಳನ್ನು ಒಗ್ಗೂಡಿಸಿ”ಹೊಳಪು” ಎಂಬ ನಾಮಾಂಕಿತದಲ್ಲಿ ಡಿ.28 ರಂದು ಕೋಟಾ ವಿವೇಕ ಹೈಸ್ಕೂಲ್ ಅವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ಪಂ. ರಾಜ್ ಮತ್ತು ನಗರ ಸ್ಥಳೀಯಾಡಳಿತದ ಎಲ್ಲ ಪ್ರತಿನಿಧಿಗಳು ಭಾಗವಹಿಸುವಂತೆ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.
ಕೋಟ ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವುಗಳ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಈ ಕಾರ್ಯಕ್ತಮವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದು,ಸ್ಥಳೀಯಾಡಳಿತ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಂಸ್ಕ್ರತಿಕ ವಿಭಾಗದಲ್ಲಿ ಗಾಯನ, ಛದ್ಮವೇಷ ಸ್ಪರ್ಧೆಗೆ ಅವಕಾಶ ನೀಡಲಾಗಿದ್ದು,ಕ್ರೀಡಾ ಕ್ಷೇತ್ರದಲ್ಲಿ ೧೦೦ ಮೀ. ಓಟ, ಗುಂಡು ಎಸೆತ, ಮಡಿಕೆ ಒಡೆಯುವುದು, ರಿಂಗ್ ಇನ್ ದಿ ವಿಕೆಟ್(ವಿಕೆಟಿಗೆ ರಿಂಗ್ ಹಾಕುವುದು ಜನಪ್ರತಿನಿಧಿಗಳು ಮತ್ತು ಪಂಚಾಯತ್ ಸಿಬ್ಬಂದಿಗಳಿಗೆ ಪ್ರತ್ಯೇಪ್ರತ್ಯೇಕವಾಗಿ ನಡೆಸಲಾಗುವುದು) ಗುಂಪು ಸ್ಪರ್ಧೆ ವಿಭಾಗದಲ್ಲಿ ಹಗ್ಗಜಗ್ಗಾಟ (ಪುರುಷರಿಗೆ, ಮಹಿಳೆಯರಿಗೆ ಪ್ರತ್ಯೇಕ) ತ್ರೋಬಾಲ್(ಮಹಿಳೆಯರಿಗೆ) ಸ್ಪರ್ಧೆ ನಡೆಯಲಿದೆ.
ಬೆಳಿಗ್ಗೆ ೮.೦೦ ಗಂಟೆಗೆ ಸರಿಯಾಗಿ ಕೋಟತಟ್ಟು ಗ್ರಾಮ ಪಂಚಾಯತ್‌ನಿಂದ ಕ್ರೀಡಾ ಜ್ಯೋತಿ ಹೊರಡಲಿದ್ದು, ಇದರ ಜೊತೆಯಲ್ಲಿ ವಿವೇಕ ವಿದ್ಯಾಲಯದಲ್ಲಿ ಗ್ರಾಮ ಪಂಚಾಯತ್‌ಗಳ ವತಿಯಿಂದ ಪಥ ಸಂಚಲನ ನಡೆಯಲಿರುವುದು. ಪಥ ಸಂಚಲನದಲ್ಲಿ ಭಾಗವಹಿಸುವ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಗೌರವ ಸ್ಮರಣಿಕೆ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲಾ ವಿವಿಧ ತ್ರಿಸ್ತರದ ಪಂಚಾಯತ್ ರಾಜ್, ನಗರ ಸ್ಥಳೀಯಾಡಳಿತದ ಪ್ರತಿನಿಧಿಗಳಿಗೆ ಟೀ-ಶರ್ಟ್, ಕ್ಯಾಪ್ ನೀಡಲಾಗುವುದು. ಪಥ ಸಂಚಲನದಲ್ಲಿ ಭಾಗವಹಿಸಿದ ವಿಜೇತ ತಂಡಕ್ಕೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸುವ ನಿರೀಕ್ಷೆಯಿದ್ದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು ಕಾರ್ಯಕ್ರಮ ಪೂರ್ತಿ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳ ಜೊತೆಗಿದ್ದು ಸ್ಥಳೀಯ ಸಂಸ್ಥೆಗಳಬಲವರ್ಧನೆಗೆಸಾಕ್ಷಿಯಾಗಲಿದ್ದಾರೆ. ಅವಿಭಜಿತ ದ.ಕ.ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತದ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಗ್ರಾಮ ಸ್ವರಾಜ್ಯದ ಕಲ್ಪನೆ ಸಾಕಾರಗೊಳಿಸಬೇಕೆಂದು ಪ್ರಭಾಕರ ಪ್ರಭು ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿಗಳಲ್ಲಿ ಮನವಿ ಮಾಡಿದ್ದಾರೆ.