ಬಂಟ್ವಾಳ

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಬ್ರಹ್ಮಕಲೋತ್ಸವ: ಬಂಟ್ವಾಳ ಸಮಾಲೋಚನಾ ಸಭೆ

ಪುನರುತ್ಥಾನದ ಹಾದಿಯಲ್ಲಿರುವ ಮಾತೆ ದೇಯಿ ಬೈದೆತಿ, ಗುರು ಸಾಯನ ಬೈದ ಹಾಗೂ ವೀರ ಪುರುಷರಾದ ಕೋಟಿಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲುನಲ್ಲಿ ಫೆ.24 ರಿಂದ ಮಾ.2 ರವೆರೆಗೆ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಮಾಲೋಚನೆ ಸಭೆ ಭಾನುವಾರ ಮೇಲ್ಕಾರಿನ ಬಿರ್ವ ಸೆಂಟರಿನಲ್ಲಿ ನಡೆಯಿತು.

ಜಾಹೀರಾತು

ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ, ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆಗುತ್ತು, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಸುಧಾಕರ ಸುವರ್ಣ, ಕ್ಷೇತ್ರದ ಯಜಮಾನ ಶ್ರೀಧರ ಪೂಜಾರಿ ಮೊದಲಾದವರು ಮಾತನಾಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿಯಲ್ಲಿ ಸರ್ವರೂ ಕೈಜೋಡಿಸುವಂತೆ ಮನವಿ ಮಾಡಿದರು.

ಕ್ಷೇತ್ರದ ವಿನ್ಯಾಸಗಾರ ಕೆ.ಸಂತೋಷ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ತಾಲೂಕು ಸಮಿತಿಯ ಗೌರವಾಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ಬೇಬಿ ಕುಂದರ್, ರಾಜೇಶ್ ಸುವರ್ಣ ಮೊದಲಾದವರಿದ್ದರು.

ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ್ ಕೆ.ಸ್ವಾಗತಿಸಿದರು. ಪ್ರಚಾರ ಸಮಿತಿ ಸಂಚಾಲಕ ಜಗದೀಶ ಕೊಯಿಲ ವಂದಿಸಿದರು.ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಫೆ.24ರಂದು ವಿವಿಧ ವೈಧಿಕ ಕಾರ್ಯಕ್ರಮಗಳು, 25 ರಂದು ವೈಭವಯುತ ಹೊರೆಕಾಣಿಕೆ ಮೆರವಣಿಗೆ, 26 ರಂದು ನೂತನ ಕೊಡಿಮರ ಪ್ರತಿಷ್ಠೆ, ಧೂಮಾವತಿ ಮತ್ತು ಸ್ವಪರಿವಾರ ದೈವಗಳ ಪ್ರತಿಷ್ಠೆ, 27 ರಂದು ನಾಗಪ್ರತಿಷ್ಠೆ, 28 ರಂದು ಮೂಲಸ್ಥಾನ ಗರಡಿ ಮತ್ತು ದೈಯಿ ಬೈದೆತಿ ಮಾತೆಯ ಸತ್ಯಧರ್ಮ ಚಾವಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಭೂತಪೂರ್ವವಾಗಿ ಸಂಪನ್ನಗೊಳ್ಳಲಿದೆ. ಅದೇ ದಿನ ಸಾಯನ ಬೈದ್ಯರ ಗುರುಪೀಠ ಸ್ಥಾಪನೆ, ದೇಯಿ ಬೈದೆತಿ ಮಹಾಸಮಾಧಿಯಲ್ಲಿ ಆರಾಧನಾ ಮಹೋತ್ಸವ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆಯ ಅನಾವರಣ ನಡೆಯಲಿದೆ.ಫೆ. 29 ರಂದು ಬೆಳಿಗ್ಗೆ ಧೂಮಾವತಿ ನೇಮೋತ್ಸವ, ರಾತ್ರಿ ಸಪರಿವಾರ ದೈವಗಳ ನೇಮೋತ್ಸವ, ಮಾ.1ರಂದು ರಾತ್ರಿ ಮೂಲಸ್ಥಾನ ಗರಡಿ ನೇಮೋತ್ಸವ, ಮಾತೆ ದೇಯಿ ಬೈದೆತಿ ದರ್ಶನ ಸೇವೆ, ತಾಯಿ ಮಕ್ಕಳ ಅಪೂರ್ವ ಸಮಾಗಮದ ಮಹೋತ್ಸವ ಸಂಪನ್ನಗೊಳ್ಳಲಿದೆ. ಮಾ.2 ರಂದು ಬೆಳಿಗ್ಗೆ ದೇಯಿ ಬೈದೆತಿ ನೇಮೋತ್ಸವ ನಡೆದು ಪ್ರಸಾದ ವಿತರಣೆ ನಡೆಯಲಿದೆ. ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಸಹಿತ ಬ್ರಹ್ಮಕಲಶೋತ್ಸವ ನಡೆಯಲಿದ್ದು ಉತ್ಸವದ ಪ್ರತಿ ದಿನ ಧಾರ್ಮಿಕ, ಸಾಂಸ್ಕ್ರತಿಕ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದ್ದು ಊರಪರವೂರ ಲಕ್ಷೋಪಲಕ್ಷ ಭಕ್ತರು ಸಮಾವೇಷಗೊಳ್ಳಲಿದ್ದಾರೆ ಎಂದು ಕ್ಷೇತ್ರ ಸಮಿತಿಗಳ ಪ್ರಮುಖರು ಮಾಹಿತಿ ನೀಡಿದರು. ಇದೇ ಸಂದರ್ಭ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಲಾಯಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

22 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 days ago