ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಕಾಯ್ದುಕೊಳ್ಳುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸರ್ವರ ಸಹಕಾರದ ಅಗತ್ಯವಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಆವರಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ನಿರ್ಮಿಸಲಾದ ಹೈಮಾಸ್ಟ್ ದೀಪವನ್ನು ಅವರು ಮಂಗಳವಾರ ರಾತ್ರಿ ಉದ್ಘಾಟಿಸಿ ಮಾತನಾಡಿದರು.
ಚರ್ಚ್ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಆಶೀರ್ವಚನ ನೀಡಿದರು. ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಶೆಟ್ಟಿ ನಾಮಫಲಕ ಅನಾವರಣ ಗೊಳಿಸಿದರು. ಚರ್ಚ್ ನ ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ನಿರ್ಮಿಸಲಾದ ರಂಗವೇದಿಕೆಯನ್ನು ಸಿಸ್ಟರ್ ನ್ಯಾನ್ಸಿ ಉದ್ಘಾಟಿಸಿದರು. ಧರ್ಮಗುರುಗಳಾದ ಫಾದರ್ ವಿಕ್ಟರ್ ಡಯಾಸ್ , ಫಾದರ್ ಜಯಕುಮಾರ್, ಪಾಲನಾ ಸಮಿತಿ ಕಾರ್ಯದರ್ಶಿ ಪ್ರೀತಿ ಪಿರೇರಾ , ವಿದ್ಯುತ್ ಗುತ್ತಿಗೆದಾರ ಬಾಲಕೃಷ್ಣ ಸೇರ್ಕಳ ಮೊದಲಾದವರು ಉಪಸ್ಥಿತರಿದ್ದರು. ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರೋಷನ್ ಬೊನಿಫಾಸ್ ಮಾರ್ಟಿಸ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರನ್ನು ಸೂರಿಕುಮೇರು ಚರ್ಚ್ ಪಾಲನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಗುತ್ತಿಗೆದಾರ ಬಾಲಕೃಷ್ಣ ಸೇರ್ಕಳ ಅವರನ್ನು ಗೌರವಿಸಲಾಯಿತು.