ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಕಚೇರಿಯಲ್ಲಿ ಬುಧವಾರ ಅನ್ವೇಷಣೆ- 2019 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.
ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಉದ್ಯಮಿ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಕಾರ್ಯಾಗಾರ ಉದ್ಘಾಟಿಸಿದರು.
ಶಿಕ್ಷಣ ಹಾಗೂ ವೃತ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಮಾಹಿತಿ ದೊರೆತರೆ ಅವರು ಉನ್ನತ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಿದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜತೆಗೆ ಜ್ಞಾನಾರ್ಜನೆಗೂ ಒತ್ತು ನೀಡುವ ಮೂಲಕ ತಮ್ಮ ವ್ಯಕ್ತಿತ್ವದ ಸಮಗ್ರ ವಿಕಸನಕ್ಕೆ ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಯುವವಾಹಿನಿ ಉಪಾಧ್ಯಕ್ಷ ಸುಂದರ ಪೂಜಾರಿ ಬೋಳಂಗಡಿ ಅಧ್ಯಕ್ಷತೆ ವಹಿಸಿದ್ದರು. ನಮ ಬಿರುವೆರ್ ಐಕ್ಯತಾ ಸಮಿತಿ ಕಾರ್ಯದರ್ಶಿ ಜಗದೀಶ ಕೊಯಿಲ, ಕಾರ್ಯಾಗಾರದ ನಿರ್ದೇಶಕ ಧನುಷ್, ಸಲಹೆಗಾರ ಪ್ರೇಮನಾಥ್ ಕೆ.ಉಪಸ್ಥಿತರಿದ್ದರು. ಮಂಗಳೂರು ಸರ್ವಜ್ಞ ಅಕಾಡೆಮಿಯ ನಿರ್ದೇಶಕ ಸುರೇಶ್ ಕೆ.ಎಸ್. ಮತ್ತು ಪಾತ್ ವೇ ಲರ್ನಿಂಗ್ ಅಕಾಡೆಮಿ ನಿರ್ದೇಶಕ ಗೋಪಾಲ ಅಂಚನ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.
ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುವರ್ಣ ಅಲೆತ್ತೂರು ಸ್ವಾಗತಿಸಿದರು. ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ ವಂದಿಸಿದರು. ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.