ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ತಾಲೂಕಿನ ಸರಕಾರಿ ನೌಕರರು, ನಿವೃತ್ತ ನೌಕರರು ಹಾಗೂ ವಿಶೇಷಚೇತನ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕ್ರತಿಕ ಸ್ಪರ್ಧೆಯು ಡಿ.28 ಮತ್ತು ಡಿ.29ರಂದು ಬಂಟ್ವಾಳ ಎಸ್.ವಿ.ಎಸ್.ದೇವಳ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಉಮಾನಾಥ ರೈ ಮೇರಾವು ಮತ್ತು ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಡಿ.28ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕ್ರೀಡಾಕೂಟ ಉದ್ಘಾಟಿಸುವರು. ತಾಲೂಕು ಪಂಚಾಯತು ಅಧ್ಯಕ್ಷ ಚಂದ್ರಹಾಸ ಕರ್ಕೆರ ಧ್ವಜಾರೋಹಣ ನೆರವೇರಿಸುವರು. ಎಸ್.ವಿ.ಎಸ್.ದೇವಳ ವಿದ್ಯಾಸಂಸ್ಥೆಗಳ ಸಂಚಾಲಕ ಗೋವಿಂದ ಪ್ರಭು, ತಹಶೀಲ್ದಾರ್ ರಶ್ಮಿ ಎಸ್.ಆರ್., ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ., ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.
Be the first to comment on "ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಕ್ರೀಡಾಕೂಟ ನಾಳೆಯಿಂದ"