ಬಂಟ್ವಾಳ

ಬಂಟ್ವಾಳ ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಶನಿವಾರ ಬಂಟ್ವಾಳ ಎಸ್.ವಿ.ಎಸ್. ದೇವಳ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು.

ಜಾಹೀರಾತು

ಕ್ರೀಡಾಕೂಟವನ್ನು ಉದ್ಘಾಟಿಸಿದ ಬಂಟ್ವಾಳ ಎಸ್.ವಿ.ಎಸ್. ದೇವಳ ಶಾಲೆಯ ಸಂಚಾಲಕ ಗೋವಿಂದ ಪ್ರಭು ಮಾತನಾಡಿ, ಎಲ್ಲರೂ ಜತೆ ಸೇರಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಾಗ ಒತ್ತಡ ನಿವಾರಣೆಯಾಗಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಎರಡು ದಿನಗಳ ಕ್ರೀಡಾಕೂಟ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಶುಭಹಾರೈಸಿದರು.

ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷ ಲೋಕನಾಥ ಶೆಟ್ಟಿ ಮಾತನಾಡಿ, ಕ್ರೀಡಾಕೂಟದಿಂದ ಪ್ರತಿಭಾ ಪ್ರದರ್ಶನದ ಜತೆಗೆ ಎಲ್ಲರೂ ಜತೆ ಸೇರುವ ಅವಕಾಶ ಸಿಗುತ್ತದೆ. ಇಂತಹ ಕಾರ್ಯದಲ್ಲಿ ಅಂಗವಿಕಲ ನೌಕರರನ್ನು ಅಭಿನಂದಿಸುವ ಕಾರ್ಯ ಶ್ಲಾಘನೀಯ ಎಂದರು.

ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಜಾತಿ ಧರ್ಮವನ್ನು ಮೀರಿದ ಕ್ರೀಡಾಕೂಟವು ಸ್ಪರ್ಧೆಯು ಸಂಬಂಧವನ್ನೂ ಬೆಸೆಯುವ ಕಾರ್ಯ ಮಾಡುತ್ತದೆ ಎಂದರು.

ನಿವೃತ್ತ ಆರೋಗ್ಯ ನಿರೀಕ್ಷಕ ಜಯರಾಮ ಪೂಜಾರಿ, ಸಂಘದ ಸಲಹೆಗಾರ ರಮೇಶ್ ನಾಯಕ್, ತಾಲೂಕು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸದಾಶಿವ, ಲಯನ್ ಮುಂದಾಳುಗಳಾದ ಗೋವರ್ಧನ ಶೆಟ್ಟಿ, ಚಂದ್ರಹಾಸ ರೈ, ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಪ್ರಕಾಶ್, ಬಂಟ್ವಾಳ ಉಪಖಜನಾಧಿಕಾರಿ ಸವಿತಾ, ವಿಟ್ಲ ಯೋಜನೆ ಸಿಡಿಪಿಒ ಸುಧಾ ಜೋಶಿ, ಪಿಂಚಣಿದಾರರ ಸಂಘದ ಕಾರ್ಯದರ್ಶಿ ನೀಲೋಜಿ ರಾವ್, ಉಪತಹಸೀಲ್ದಾರ್ ರಾಧಾಕೃಷ್ಣ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಕೇಶವ, ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ತೌಸೀಪ್, ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಕಮಲಾಕ್ಷ ಉಪಸ್ಥಿತರಿದ್ದರು.

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ರಮ್ಯಶ್ರೀ ಜೈನ್ ಅವರನ್ನು ಅಭಿನಂದಿಸಲಾಯಿತು. ಅಂಗವಿಕಲ ನೌಕರರನ್ನು ಗೌರವಿಸಲಾಯಿತು.

ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಸಂತೋಷ್ ವಂದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಯರಾಮ್ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts