www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಮ್ಮೇಳನ ಸ್ವಾಗತ ಸಮಿತಿ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಹಯೋಗದಲ್ಲಿ ಶನಿವಾರ ಮತ್ತು ಭಾನುವಾರ ನಡೆಯುವ ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ, ಕನ್ನಡ ಸಾಹಿತ್ಯ ಪರಿಷತ್ ಧ್ವಜ ಹಾಗೂ ಕನ್ನಡ ಧ್ವಜಾರೋಹಣವನ್ನು ಶನಿವಾರ ಬೆಳಗ್ಗೆ ನೆರವೇರಿಸಲಾಯಿತು.
ದ.ಕ.ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದರೆ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಕೆ. ಮೋಹನ ರಾವ್ ಪರಿಷತ್ ಧ್ವಜವನ್ನು ಅರಳಿಸಿದರು. ಮಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಎಸ್. ಶೆಟ್ಟಿ ಕನ್ನಡ ಧ್ವಜಾರೋಹಣ ಮಾಡಿದರು. ಈ ವೇಳೆ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಜೆ.ಪ್ರಹ್ಲಾದ್ ಶೆಟ್ಟಿ, ಸಂಚಾಲಕರಾದ ಗಂಗಾಧರ ಆಳ್ವ, ಬಾಲಕೃಷ್ಣ ಆಳ್ವ ಕೊಡಾಜೆ, ಪ್ರಧಾನ ಕಾರ್ಯದರ್ಶಿ ಸಿ.ಶ್ರೀಧರ್, ಜತೆ ಕಾರ್ಯದರ್ಶಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕೊಂಬಿಲ, ಉಪಾಧ್ಯಕ್ಷ ಅಪ್ಪುರಾಯ ಪೈ ಹಾಗೂ ವಿವಿಧ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದರು. ಶಿಕ್ಷಕ ದಿನಕರ ಪೂಜಾರಿ ಸ್ವಾಗತಿಸಿದರು. ಶಿಕ್ಷಕಿ ವಿಶಾಲಾಕ್ಷಿ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.