ಸರ್ವಜನ ಹಿತ ಸಾಹಿತ್ಯದ ಉದ್ದೇಶ- ಡಾ. ಧರಣೀದೇವಿ ಮಾಲಗತ್ತಿ

ಸಾಹಿತ್ಯದ ಉದ್ದೇಶ ಒಳಿತು ತರುವುದು. ಸರ್ವಜನಕ್ಕೂ ಹಿತಕರವಾದ ಸುಖಕರವಾದ ಸಾಮಾಜಿಕ ವ್ಯವಸ್ಥೆ ನಿರ್ಮಾಣ ಸಾಹಿತ್ಯದ ಉದ್ದೇಶ. ಸಾಹಿತ್ಯ ಪಯಣ ಮನಸುಗಳನ್ನು ವಿಕಸನಗೊಳಿಸುತ್ತ ಸಾಗಲಿ ಎಂದು ಬಂಟ್ವಾಳ ತಾಲೂಕು ೨೦ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಡಾ. ಧರಣೀದೇವಿ ಮಾಲಗತ್ತಿ ಹೇಳಿದರು.

ಮೆರವಣಿಗೆಗೆ ಚಾಲನೆ

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸಮ್ಮೇಳನ ಸ್ವಾಗತ ಸಮಿತಿ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಎರಡು ದಿನಗಳ ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತು

ಪುಸ್ತಕ ಹಸ್ತಾಂತರ

ಸ್ಥಳೀಯ ಭಾಷೆಯ ಪಠ್ಯಗಳನ್ನು ಬಾಲ್ಯದಿಂದಲೇ ಕಲಿಯುವುದು ಬಹಳ ಮುಖ್ಯ. ಸರ್ವ ಸಮಾನತೆ, ನ್ಯಾಯ, ಸ್ವಾತಂತ್ರ್ಯ ಇವುಗಳನ್ನು ಉಳಿಸುವುದು ನಮ್ಮ ಆದ್ಯತೆ. ಸಾಹಿತ್ಯ ಸರ್ವರಿಗೂ ಹಿತವನ್ನುಂಟು ಮಾಡುವ ಬದುಕಿನ ರೀತಿಯನ್ನೂ ಪೋಷಿಸಬೇಕು. ಬರವಣಿಗೆ ಚಿಂತನೆಯನ್ನು ಉದ್ದೀಪಿಸುವ ಕೆಲಸವನ್ನು ಮಾಡಬೇಕೇ ಹೊರತು, ಭಾವಾವೇಶಕ್ಕೊಳಗು ಮಾಡುವುದನ್ನಲ್ಲ ಎಂದು ಅವರು ಹೇಳಿದರು.

ಧ್ವಜ ಹಸ್ತಾಂತರ

ಹಿರಿಯ ವಿದ್ವಾಂಸ ಡಾ.ಬಿ.ಪ್ರಭಾಕರ ಶಿಶಿಲ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶಿಕ್ಷಕರೆಲ್ಲರೂ ಕನ್ನಡಕ್ಕಾಗಿ ಏನು ಮಾಡುತ್ತಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಕನ್ನಡಕ್ಕೆ ಕುತ್ತು ಬಂದಿದ್ದರೆ ಅದಕ್ಕೆ ಬೇರೆ ಭಾಷೆ ಕಾರಣವಲ್ಲ. ಏಕರೂಪದ ಶಿಕ್ಷಣಕ್ಕೆ ಸರಕಾರ ಒತ್ತು ನೀಡಬೇಕು. ಹಿಂದಿ ಅಥವಾ ಇಂಗ್ಲಿಷ್ ನ ಹೇರಿಕೆ ಸರಿಯಲ್ಲ ಇದರಿಂದ ಸಂಸ್ಕೃತಿ ನಾಶವಾಗುವ ಅಪಾಯವಿದೆ ಎಂದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೊಸ ಕೃತಿಗಳನ್ನು ಬಿಡುಗಡೆಗೊಳಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಮೋಹನ ರಾವ್ ಪ್ರಸ್ತಾವನೆಗೈದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಆಶಯ ನುಡಿಗಳನ್ನಾಡಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ಪಿ.ತುಕಾರಾಮ ಪೂಜಾರಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ,  ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ ತುಂಗೆರೆಕೋಡಿ, ಬಾಲವಿಕಾಸ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಎಸ್.ನಾಯ್ಕ್, ಮಾತಾ ಡೆವಲಪರ್‍ಸ್ ನ ಆಡಳಿತ ನಿರ್ದೇಶಕ ಸಂತೋಷ ಶೆಟ್ಟಿ ಅರೆಬೆಟ್ಟು, ಜಿಲ್ಲಾ ಕ.ಸಾಪ ದ ಪದಾಧಿಕಾರಿಗಳಾದ ಡಾ.ಎಂ. ಶ್ರೀನಾಥ್, ಪೂರ್ಣಿಮಾ, ವಿಜಯಲಕ್ಷ್ಮೀ ಶೆಟ್ಟಿ,  ಪುತ್ತೂರು ತಾಲೂಕು ಕಸಾಪ ಅಧ್ಯಕ್ಷ ಐತಪ್ಪ ನಾಯ್ಕ್ , ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಗ್ರೇಸ್ ಪಿ.ಸಲ್ದಾನ ವೇದಿಕೆಯಲ್ಲಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ವಸ್ತುಪ್ರದರ್ಶನ ಉದ್ಘಾಟಿಸಿದರು. ಶ್ರೀಕ್ಷೇತ್ರ ನಂದಾವರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು.

ದೀಪ ಪ್ರಜ್ವಲನೆ

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಲಾಸಂಚಾಲಕ  ಜಡ್ತಿಲ ಪ್ರಹ್ಲಾದ ಶೆಟ್ಟಿ ಸ್ವಾಗತಿಸಿದರು. ಸಿದ್ದಕಟ್ಟೆ ಪ.ಪೂ.ಕಾಲೇಜಿನ ಉಪಪ್ರಾಂಶುಪಾಲ ರಮಾನಂದ ನೂಜಿಪ್ಪಾಡಿ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸಿದರು.  ಸ್ವಾಗತ ಸಮಿತಿ ಸಂಚಾಲಕ ಬಾಲಕೃಷ್ಣ ಆಳ್ವ , ಶಿಕ್ಷಕಿ ರಶ್ಮೀ ಫೆರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಯಜ್ಞೇಶ್ವರಿ ಶೆಟ್ಟಿ ನಿರ್ವಹಿಸಿದರು. ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ವಂದಿಸಿದರು.

ಜಾಹೀರಾತು

ಮೆರವಣಿಗೆ: 

ಮಾಣಿ ರಾಜ್ ಕಮಲ್  ಅಡಿಟೋರಿಯಂ ನಿಂದ ಸಮ್ಮೇಳನದ ಸಭಾಂಗಣದವರೆಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆಯನ್ನು ಸೂರಿಕುಮೇರು ಸಂತ ಜೋಸೆಫರ ದೇವಾಲಯದ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಉದ್ಘಾಟಿಸಿದರು. ಮಾಣಿ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು ಕನ್ನಡ ಭುವನೇಶ್ವರಿಗೆ  ಪುಷ್ಪಾರ್ಚನೆಗೈದರು. ಸಮ್ಮೇಳನಾಧ್ಯಕ್ಷೆ ಡಾ. ಧರಣೀದೇವಿ ಮಾಲಗತ್ತಿ ಯವರನ್ನು ತೆರೆದ ಜೀಪಿನಲ್ಲಿ ಸಮ್ಮೇಳನ ಸಭಾಂಗಣಕ್ಕೆ ಕರೆತರಲಾಯಿತು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಪ್ರದೀಪ ಕುಮಾರ್ ಕಲ್ಕೂರ, ಸ್ವಾಗತ ಸಮಿತಿ ಅಧ್ಯಕ್ಷ ಜೆ.ಪ್ರಹ್ಲಾದ್ ಶೆಟ್ಟಿ,  ಕಾರ್ಯಾಧ್ಯಕ್ಷೆ ಮಂಜುಳಾ ಮಾಧವ ಮಾವೆ, ತಾ.ಪಂ.ಸದಸ್ಯೆ ಮಂಜುಳಾ ಕುಶಲ ಪೆರಾಜೆ ತೆರೆದ ಜೀಪಿನಲ್ಲಿ ಅಧ್ಯಕ್ಷರಿಗೆ ಸಾಥ್ ನೀಡಿದರು. ಮೆರವಣಿಗೆ ಸಮಿತಿ ಸಂಚಾಲಕರಾದ ಉದಯ ಕುಮಾರ್ ರೈ, ಸುದೀಪ್ ಕುಮಾರ್ ಶೆಟ್ಟಿ,ರತ್ನಾಕರ, ಗಣೇಶ್ ರೈ, ನರಸಿಂಹ ಮಾಣಿ  ಹಾಗೂ ಸಮಿತಿ ಸದಸ್ಯರು ಮೆರವಣಿಗೆಯ ನೇತೃತ್ವ ವಹಿಸಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರ್ವಜನ ಹಿತ ಸಾಹಿತ್ಯದ ಉದ್ದೇಶ- ಡಾ. ಧರಣೀದೇವಿ ಮಾಲಗತ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*