ಬಿ.ಆರ್.ಎಂ.ಪಿ. ಶಾಲೆಯಲ್ಲಿ ಸಂಸ್ಕೃತಿ ಕಾರ್ಯಕ್ರಮ, ವಾರ್ಷಿಕೋತ್ಸವ ಸಂಭ್ರಮ

ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮವಾದ ಸಂಸ್ಕೃತಿ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಪ್ರತ್ಯೇಕವಾಗಿ ನಡೆದವು.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಶಾಲಾ ವಾರ್ಷಿಕೋತ್ಸವದಲ್ಲಿ ನಿವೃತ್ತ ಕನ್ನಡ ಉಪನ್ಯಾಸಕ ಮಧುಕರ ಮಲ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಕ್ಕಳು ಹೆತ್ತವರ ಪ್ರತಿಬಿಂಬ. ಹಿರಿಯರ ಪ್ರತಿಯೊಂದು ಕೆಲಸವನ್ನೂ ಮಕ್ಕಳು ಅನುಕರಣೆ ಮಾಡುತ್ತಾರೆ. ಆದ್ದರಿಂದ ಹೆತ್ತವರು ಆತ್ಮಾವಲೋಕನ ಮಾಡಿಕೊಳ್ಳಬೇಕು.  ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಸ್ವಾಸ್ಥ್ಯಕರ ಸಮಾಜದ ನಿರ್ಮಾತೃಗಳಾಗುತ್ತಾರೆ ಎಂದು ಹೇಳಿದರು.  ಶಾಲಾ ಸಂಚಾಲಕರಾದ ಭಾಮೀ ವಿಠ್ಠಲ್‌ದಾಸ್ ಶೆಣೈ ಕಾರ್‍ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.  ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ  ಸಂಪತ್ ಕುಮಾರ್ ಶೆಟ್ಟಿ, ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಹಿರಿಯ ಸದಸ್ಯರಾದ  ರವಿದಾಸ್ ಪೈ, ಶಾಲಾ ಆಡಳಿತಾಕಾರಿ ಐತಪ್ಪ ಪೂಜಾರಿ, ಪ್ರಿನ್ಸಿಪಾಲ್ ರಮಾಶಂಕರ್ ಸಿ ಉಪಸ್ಥಿತರಿದ್ದರು. ಶಾಲಾ ನಾಯಕ ಯಾತ್ವಿಕ್ ಎ ಶೆಟ್ಟಿ, ಉಪನಾಯಕಿ ಭಾರ್ಗವಿ ಶರ್ಮ ಕಾರ್‍ಯಕ್ರಮ ನಿರೂಪಿಸಿದರು.  ಕಳೆದ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭಾ ಕಾರ್‍ಯಕ್ರಮದ ಬಳಿಕ ಸಾಂಸ್ಕೃತಿಕ  ಕಾರ್‍ಯಕ್ರಮ ಜರುಗಿತು.

ಜಾಹೀರಾತು

ಸಂಸ್ಕೃತಿ ಕಾರ್ಯಕ್ರಮ ಉದ್ಘಾಟನೆ

ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ಸಂಸ್ಕೃತಿಯನ್ನು ವಿದುಷಿ ವಿದ್ಯಾ ಮನೋಜ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಸಂಚಾಲಕ ಭಾಮೀ ವಿಠ್ಠಲದಾಸ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಮಾಂಬಾಡಿ, ಪ್ರಿನ್ಸಿಪಾಲ್ ರಮಾಶಂಕರ್ ಸಿ, ಆಡಳಿತಾಧಿಕಾರಿ ಐತಪ್ಪ ಪೂಜಾರಿ ಉಪಸ್ಥಿತರಿದ್ದರು.  ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಅಂತರ್ ಶಾಲಾ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಅಭಿನಂದಿಸಿ ಗೌರವಿಸಲಾಯಿತು.  ಬಿ ನಿಧಿ ಬಾಳಿಗಾ, ಅನಲ ಜೆ ಶೆಟ್ಟಿ, ಪ್ರಜ್ಞಾ ಗಟ್ಟಿ ನಿರೂಪಿಸಿದರು.

ಜಾಹೀರಾತು

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಆರ್.ಎಂ.ಪಿ. ಶಾಲೆಯಲ್ಲಿ ಸಂಸ್ಕೃತಿ ಕಾರ್ಯಕ್ರಮ, ವಾರ್ಷಿಕೋತ್ಸವ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*