ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮವಾದ ಸಂಸ್ಕೃತಿ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಪ್ರತ್ಯೇಕವಾಗಿ ನಡೆದವು.
ಶಾಲಾ ವಾರ್ಷಿಕೋತ್ಸವದಲ್ಲಿ ನಿವೃತ್ತ ಕನ್ನಡ ಉಪನ್ಯಾಸಕ ಮಧುಕರ ಮಲ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಕ್ಕಳು ಹೆತ್ತವರ ಪ್ರತಿಬಿಂಬ. ಹಿರಿಯರ ಪ್ರತಿಯೊಂದು ಕೆಲಸವನ್ನೂ ಮಕ್ಕಳು ಅನುಕರಣೆ ಮಾಡುತ್ತಾರೆ. ಆದ್ದರಿಂದ ಹೆತ್ತವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಸ್ವಾಸ್ಥ್ಯಕರ ಸಮಾಜದ ನಿರ್ಮಾತೃಗಳಾಗುತ್ತಾರೆ ಎಂದು ಹೇಳಿದರು. ಶಾಲಾ ಸಂಚಾಲಕರಾದ ಭಾಮೀ ವಿಠ್ಠಲ್‌ದಾಸ್ ಶೆಣೈ ಕಾರ್‍ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ, ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಹಿರಿಯ ಸದಸ್ಯರಾದ ರವಿದಾಸ್ ಪೈ, ಶಾಲಾ ಆಡಳಿತಾಕಾರಿ ಐತಪ್ಪ ಪೂಜಾರಿ, ಪ್ರಿನ್ಸಿಪಾಲ್ ರಮಾಶಂಕರ್ ಸಿ ಉಪಸ್ಥಿತರಿದ್ದರು. ಶಾಲಾ ನಾಯಕ ಯಾತ್ವಿಕ್ ಎ ಶೆಟ್ಟಿ, ಉಪನಾಯಕಿ ಭಾರ್ಗವಿ ಶರ್ಮ ಕಾರ್‍ಯಕ್ರಮ ನಿರೂಪಿಸಿದರು. ಕಳೆದ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭಾ ಕಾರ್‍ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್‍ಯಕ್ರಮ ಜರುಗಿತು.
ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ಸಂಸ್ಕೃತಿಯನ್ನು ವಿದುಷಿ ವಿದ್ಯಾ ಮನೋಜ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಸಂಚಾಲಕ ಭಾಮೀ ವಿಠ್ಠಲದಾಸ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಮಾಂಬಾಡಿ, ಪ್ರಿನ್ಸಿಪಾಲ್ ರಮಾಶಂಕರ್ ಸಿ, ಆಡಳಿತಾಧಿಕಾರಿ ಐತಪ್ಪ ಪೂಜಾರಿ ಉಪಸ್ಥಿತರಿದ್ದರು. ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಅಂತರ್ ಶಾಲಾ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಅಭಿನಂದಿಸಿ ಗೌರವಿಸಲಾಯಿತು. ಬಿ ನಿಧಿ ಬಾಳಿಗಾ, ಅನಲ ಜೆ ಶೆಟ್ಟಿ, ಪ್ರಜ್ಞಾ ಗಟ್ಟಿ ನಿರೂಪಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)