ಕಟೀಲು ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ , ಸಹಸ್ರ ಚಂಡಿಕಾಯಾಗ, ಕೋಟಿ ಜಪಯಜ್ಞ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವ ಭಾವಿ ಸಮಾಲೋಚನಾ ಸಭೆ ಜ.5ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.
ಜಾಹೀರಾತು
ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಟೀಲು ಕ್ಷೇತ್ರದ ಅನಂತ ಅಸ್ರಣ್ಣ ಹಾಗೂ ಹರಿನಾರಾಯಣ ಅಸ್ರಣ್ಣ, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಜನಪ್ರತಿನಿಧಿಗಳು ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಕ್ಷೇತ್ರದ ಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ ಹಾಗೂ ಭುವನೇಶ್ ಪಚ್ಚಿನಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜ.5ರಂದು ಬಿ.ಸಿ.ರೋಡಿನಲ್ಲಿ ಕಟೀಲು ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ"
Be the first to comment on "ಜ.5ರಂದು ಬಿ.ಸಿ.ರೋಡಿನಲ್ಲಿ ಕಟೀಲು ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ"