ನಂದಾವರದಲ್ಲಿ ಮೇ.24ರಂದು ಸಾಮೂಹಿಕ ವಿವಾಹ

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಸನ್ನಿಧಿಯಲ್ಲಿ ಮೇ.24ರಂದು ಸಾಮೂಹಿಕ ವಿವಾಹವನ್ನು ನಡೆಸಲಾಗುವುದು ನಂದಾವರ ಕ್ಷೇತ್ರದ ಕಾರ್ಯನಿರ್ವಾಹಣಾಧಿಕಾರಿ ಹರಿಶ್ಚಂದ್ರ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರದ ನಿರ್ದೇಶನದಂತೆ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರ ಹಿಂದು ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ನಡೆಯುವ ವಿವಾಹದಲ್ಲಿ ವರನಿಗೆ ರೂ. 5 ಸಾವಿರ, ವಧುವಿಗೆ 10 ಸಾವಿರ ಮತ್ತು ಚಿನ್ನದ ತಾಳಿ ಸೇರಿದಂತೆ ಚಿನ್ನಕ್ಕಾಗಿ 40 ಸಾವಿರ ರೂ ನೀಡಲಾಗುತ್ತದೆ. ವಧೂವರರು ವಿವಾಹ ನೋಂದಾಯಿಸಿಕೊಳ್ಳಲು ಏಪ್ರಿಲ್ 25 ಕೊನೆಯ ದಿನಾಂಕವಾಗಿದ್ದು ಏ.30ರಂದು ವಧೂವರರ ವಿವರ ದೇವಾಲಯದಲ್ಲಿ ಪ್ರಕಟಿಸಲಾಗುವುದು. ವಧೂವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮೇ.4 ಆಗಿದ್ದು  ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ವಧೂವರರ ಪಟ್ಟಿಯನ್ನು ಮೇ.2ರಂದು ಪ್ರಕಟಿಸಲಾಗುವುದು ದೇವಸ್ಥಾನದ ದೂರವಾಣಿ ಸಂಖ್ಯೆ 9480280091, 08255-280091 ಸಂಪರ್ಕಿಸಬಹುದು.

www.bantwalnews.com Editor: Harish Mambady

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂದಾವರದಲ್ಲಿ ಮೇ.24ರಂದು ಸಾಮೂಹಿಕ ವಿವಾಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*