ಸಂಘಟನೆಯೊಂದರ ಸದಸ್ಯರು ಹಾಗೂ ರಾಜಕೀಯ ನಾಯಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರ ವಿರುದ್ಧ ದೂರು ನೀಡಲಾಗಿದ್ದು, ಈ ಪೈಕಿ ಅನ್ವರ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ಪೆರುವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರುಗಳು ಎನ್.ಆರ್.ಸಿ ಮತ್ತು ಸಿ.ಎ.ಎ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರು ವಾಮಂಜೂರಿನ ಕೆಲವು ವ್ಯಕ್ತಿಗಳಿಗೆ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೋರ್ವರಿಗೆ ಪೋನ್ ಕರೆ ಮಾಡಿ ಒತ್ತಡ ಹೇರಿದ್ದು ಹಾಗೂ ಈ ಸಂಬಂಧ ಆರೋಪಿಗಳು ಕಳುಹಿಸಿರುವ ವಾಟ್ಸಾಪ್ ಸಂದೇಶದಲ್ಲಿ ಸಂಘಟನೆಯೊಂದರ ಸದಸ್ಯರುಗಳನ್ನು ಹಾಗೂ ಕೆಲವು ರಾಜಕೀಯ ನಾಯಕರುಗಳನ್ನು ಕೊಲ್ಲುವ ಬೆದರಿಕೆ ಹಾಕಿದ್ದಾಗಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ: 153(ಎ),504,505(2),507,ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೆದರಿಕೆ ಆರೋಪ: ಪೆರುವಾಯಿ ನಿವಾಸಿ ವಿಟ್ಲ ಪೊಲೀಸರ ವಶಕ್ಕೆ"
Be the first to comment on "ಬೆದರಿಕೆ ಆರೋಪ: ಪೆರುವಾಯಿ ನಿವಾಸಿ ವಿಟ್ಲ ಪೊಲೀಸರ ವಶಕ್ಕೆ"