ಕಾರೊಂದು ನಿರ್ಮಾಣದ ಹಂತದಲ್ಲಿರುವ ಸೇತುವೆಯ ಗುಂಡಿಗೆ ಬಿದ್ದು ಚಾಲಕ ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಗುರುವಾರ ನಡೆದಿದೆ.
ಜಾಹೀರಾತು
ಬಂಟ್ವಾಳ ಬೈಪಾಸ್ ಗ್ಯಾರೊಂಜೊಂದರ ಮುಂಭಾಗದಲ್ಲಿ ನಡೆಯುತ್ತಿರುವ ಸೇತುವೆಯ ಕಾಮಗಾರಿಯ ಗುಂಡಿಗೆ ಕಾರು ಬಿದ್ದ ಪರಿಣಾಮ ಚಾಲಕನಿಗೆ ಗಾಯಗಳಾಗಿವೆ. ಕಾರು ಚಾಲಕ ರಾಜೇಶ್ ಬಂಟ್ವಾಳ ಕಡೆಯಿಂದ ಬಿ.ಸಿ.ರೋಡು ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಗುಂಡಿಗೆ ಬಿದ್ದು ಈ ಅಪಘಾತ ಸಂಭವಿಸಿದೆ. ಬಿ.ಸಿ.ರೋಡು-ಪುಂಜಾಲಕಟ್ಟೆಯವರೆಗೆ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಸಾಕಷ್ಟು ಧೂಳು ಇಲ್ಲಿದ್ದು, ವಾಹನ ಸವಾರರು ಗಲಿಬಿಲಿಗೊಳ್ಳುವ ಸನ್ನಿವೇಶ ನಿರ್ಮಾಣಗೊಳ್ಳುತ್ತಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ಸೇತುವೆ ನಿರ್ಮಾಣ ಗುಂಡಿಗೆ ಬಿದ್ದ ಕಾರು"