ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಅಭಿವೃದ್ಧಿ, ಸಮಗ್ರತೆಗೆ ಪೂರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ಸಂಜೆ ರಾಷ್ಟ್ರ ಜಾಗರಣ ಸಮಿತಿ ನೇತೃತ್ವದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯಿದೆ ೨೦೧೯ ಸಮರ್ಥನಾ ಸಮಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಮಂಗಳೂರು ಕುಳೂರುನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಸಮರ್ಥನಾ ಸಭೆಗೆ ಬಂಟ್ವಾಳ ಕ್ಷೇತ್ರದಿಂದ ಸುಮಾರು ೨೫,೦೦೦ ಜನರು ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ರಾಷ್ಟೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಪರ್ಕ ಪ್ರಮುಖ್ ರವೀಂದ್ರ, ಅಭಿಯಾನ ಪ್ರಮುಖ್ ಸುಧೀರ್ ಶೆಟ್ಟಿ ಕಣ್ಣೂರು ಇವರು ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನಾ ಜಿ.ಕೆ ಭಟ್, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ರಾಮದಾಸ್ ಬಂಟ್ವಾಳ ಸ್ವಾಗತಿಸಿ, ದೇವಪ್ಪ ಪೂಜಾರಿ ವಂದಿಸಿದರು. ಮೋನಪ್ಪ ದೇವಸ್ಯ ಕಾರ್ಯಕ್ರಮವನ್ನು ನಿರೂಪಿಸಿದರು.
Be the first to comment on "ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ, ಸಮಗ್ರತೆಗೆ ಪೂರಕ: ನಳಿನ್ ಕುಮಾರ್ ಕಟೀಲ್"