ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ, ಸಮಗ್ರತೆಗೆ ಪೂರಕ: ನಳಿನ್ ಕುಮಾರ್ ಕಟೀಲ್

ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಅಭಿವೃದ್ಧಿ, ಸಮಗ್ರತೆಗೆ ಪೂರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜಾಹೀರಾತು

ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ಸಂಜೆ  ರಾಷ್ಟ್ರ ಜಾಗರಣ ಸಮಿತಿ ನೇತೃತ್ವದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯಿದೆ ೨೦೧೯ ಸಮರ್ಥನಾ ಸಮಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ  ಮಂಗಳೂರು ಕುಳೂರುನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಸಮರ್ಥನಾ ಸಭೆಗೆ ಬಂಟ್ವಾಳ ಕ್ಷೇತ್ರದಿಂದ ಸುಮಾರು ೨೫,೦೦೦ ಜನರು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ರಾಷ್ಟೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಪರ್ಕ ಪ್ರಮುಖ್ ರವೀಂದ್ರ, ಅಭಿಯಾನ ಪ್ರಮುಖ್ ಸುಧೀರ್ ಶೆಟ್ಟಿ ಕಣ್ಣೂರು ಇವರು ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನಾ ಜಿ.ಕೆ ಭಟ್, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ರಾಮದಾಸ್ ಬಂಟ್ವಾಳ ಸ್ವಾಗತಿಸಿ, ದೇವಪ್ಪ ಪೂಜಾರಿ ವಂದಿಸಿದರು. ಮೋನಪ್ಪ ದೇವಸ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ, ಸಮಗ್ರತೆಗೆ ಪೂರಕ: ನಳಿನ್ ಕುಮಾರ್ ಕಟೀಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*