ಜಿಲ್ಲಾ ಸುದ್ದಿ

ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾದಿಂದ ಪೌರತ್ವ ಜಾಗೃತಿ ಅಭಿಯಾನ ಸಮಾಲೋಚನಾ ಸಭೆ

ಮಂಗಳೂರು: ಬಿಜೆಪಿಯ ದ.ಕ.ಜಿಲ್ಲಾ ಎಸ್ಸಿ ಮೋರ್ಚಾದ ಪದಾಧಿಕಾರಿಗಳು, ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜನಪ್ರತಿನಿಧಿಗಳನ್ನೊಳಗೊಂಡ ಸಭೆ ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆಯಿತು.

ಜಾಹೀರಾತು

ಪೌರತ್ವ ಕಾಯ್ದೆ, ಸಿಎಎ, ಎನ್.ಆರ್.ಸಿ. ಕಾಯ್ದೆಯನ್ನು ಬೆಂಬಲಿಸುವಂತೆ ಕ್ಷೇತ್ರಗಳ ಜನರಿಗೆ ಮನವರಿಕೆ ಮಾಡಲು ಪರಿಶಿಷ್ಟ ಜಾತಿಯ ಬಿಜೆಪಿ ಜನಪ್ರತಿನಿಧಿಗಳಿಗೆ ಸೂಚಿಸಲಾಯಿತು. ಬೂತ್ ಮಟ್ಟಗಳಲ್ಲಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಸಮುದಾಯದವರ ಮನೆ ಮನೆಗೆ ಸಂಪರ್ಕ ಮಾಡಿ ಸಿಎಎ ಹಾಗೂ ಎನ್ಆರ್ಸಿ ಬಗ್ಗೆ ಜನಜಾಗೃತಿ ಸಭೆಗಳನ್ನು ಮಾಡಬೇಕಾಗಿ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು  ತಿಳಿಸಿದರು

ಅದಲ್ಲದೆ ಸಿಎಎ ಮತ್ತು ಎನ್ಆರ್ಸಿ ಬಗ್ಗೆ ಚಿಂತನ ಸಮಾವೇಶ ಹಾಗೂ ಸಂವಾದ ಕಾರ್ಯಕ್ರಮಗಳು ಜನವರಿ 26ರಂದು  ತೀರ್ಮಾನಿಸಲಾಯಿತು ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನಯ ನೇತ್ರ,  ಶೀನ ಮಾಸ್ತಿಕಟ್ಟೆ, ಬಿ ಎಸ್ ವಸಂತ್ ಕುಮಾರ್, ರಾಜ್ಯ ಕಾರ್ಯದರ್ಶಿ ದಕ್ಷಿಣದ ಅಧ್ಯಕ್ಷ ಉಮನಾಥ್ ಅಮೀನ್, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಜ್ ಕುಮಾರ್ ಹಾಗೂ ಭರತ್ ಕುಮಾರ್ ಹಾಗೂ  ಜಿಲ್ಲಾ ಪದಾಧಿಕಾರಿಗಳು ಮಂಡಳದ ಪದಾಧಿಕಾರಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ