ವಿಟ್ಲ

ಜನವರಿ 14ರಿಂದ 22ರವರೆಗೆ ವಿಟ್ಲದಲ್ಲಿ ಸಂಭ್ರಮದ ಜಾತ್ರೋತ್ಸವ

ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ .14ರಿಂದ 22ರ ವರೆಗೆ ನಡೆಯಲಿದೆ

www.bantwalnews.com Editor: Harish Mambady

ಜಾಹೀರಾತು

.14ರಂದು ಧ್ವಜಾರೋಹಣ, ಲಕ್ಷದೀಪೋತ್ಸವ ನಡೆಯಲಿದೆ. .15, 16 ಮತ್ತು 17ರಂದು ನಿತ್ಯೋತ್ಸವ ನಡೆಯಲಿದೆ. .18ರಂದು ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮಿಸಲಿದೆ. ರಾತ್ರಿ ಬಯ್ಯದ ಬಲಿ ಉತ್ಸವ ನಡೆಯಲಿದೆ. 19ರಂದು ಕೆರೆ ಆಯನ, 20ರಂದು ದರ್ಶನ ಬಲಿ, ಹೂತೇರು ನಡೆಯಲಿದೆ. 21ರಂದು ಮಹಾರಥೋತ್ಸವ ನಡೆಯಲಿದೆ. 22ರಂದು ಕವಟೋದ್ಘಾಟನೆ ನಡೆಯಲಿದೆ 14ರಿಂದ 22 ವರೆಗೆ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಗಳು ನಡೆಯಲಿವೆ.

ಶ್ರೀ ಕ್ಷೇತ್ರ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ, ಹಾಗೂ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಇದರ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಒಡಿಯೂರು ಶ್ರೀಗಳು, ಮಾಣಿಲ ಶ್ರೀಗಳುಕಣಿಯೂರು ಶ್ರೀಗಳು, ಬಾಳೆಕೋಡಿ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ .14ರಂದು ಅರ್ಧ ಏಕಾಹ ಭಜನೆ ನಡೆಯಲಿದೆ. ಸಂಜೆ ಭಜನಾ ಉಲ್ಪೆ, ಹಸಿರುವಾಣಿ ಹೊರೆಕಾಣಿಕೆ ಮತ್ತು ಶ್ರೀ ದೇವರಿಗೆ ನೂತನ ರಜತ ಕವಚದ ಮೆರವಣಿಗೆ ನಡೆಯಲಿದೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts