ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಜಾಹೀರಾತು
ಕಲ್ಲಡ್ಕ ಶಾಲಾಬಳಿ ನಿವಾಸಿ ಮುಹಮ್ಮದ್ ಅಜ್ಮಲ್(19), ಮಾಣಿ ನಿವಾಸಿ ಪರೀಕ್ಷಿತ್ (19) ಮೃತಪಟ್ಟ ದ್ವಿಚಕ್ರ ವಾಹನ ಸವಾರರು. ಸ್ಥಳೀಯ ನಿವಾಸಿ, ಪದ್ಮನಾಭ (28) ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಘಟನೆಯಿಂದ ದ್ವಿಚಕ್ರ ವಾಹನ ಸವಾರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದ್ವಿಚಕ್ರ ವಾಹನಗಳೆರಡೂ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ ಸಮೀಪ ಅಪಘಾತ: ಇಬ್ಬರು ಮೃತ್ಯುವಶ"