ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ 19ರಂದು ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಈ ಸಂದರ್ಭ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೊಲಿಯೋ ಹನಿಯನ್ನು ತಮ್ಮ ಹತ್ತಿರದ ಪೊಲಿಯೋ ಬೂತ್ ಗಳಲ್ಲಿ ನೀಡಲು ಕೋರಲಾಗಿದೆ. ಬೆಳಗ್ಗೆ 8ರಿಂದ 5ರವರೆಗೆ ಎಲ್ಲ ಪೊಲಿಯೋ ಬೂತ್ ಗಳು ತೆರೆದಿರುತ್ತವೆ. ಬಾಕಿ ಉಳಿದ ಮಕ್ಕಳಿಗೆ ನಗರ ಪ್ರದೇಶದಲ್ಲಿ ಮೂರು ದಿನ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಎರಡು ದಿನ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಪೊಲಿಯೋ ಹನಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ 19ರಂದು ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ"