ಸುದ್ದಿ ಮತ್ತು ವಿಡಿಯೋ
ದ.ಕ.ಜಿಪಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಕ್ಕಳಿಗೆ ಪೊಲಿಯೋ ಹನಿ ನೀಡುವ ಮೂಲಕ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ತಾ. ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ. ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಆಡಳಿತ ವೈದ್ಯಾಧಿಕಾರಿ ಡಾ. ಸದಾಶಿವ ಉಪಸ್ಥಿತರಿದ್ದು ಶುಭ ಹಾರೈಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ೦-೫ ವರ್ಷದ ೩೦೫೩೩ ಮಕ್ಕಳಿಗೆ ಪೋಲಿಯೋ ಹನಿ ನೀಡಬೇಕಾಗಿದ್ದು ತಾಲೂಕಿನಾದ್ಯಂತ ೧೯೦ ಬೂತ್‌ಗಳನ್ನು ತೆರೆಯಲಾಗಿದೆ. ಇದರಲ್ಲಿ ೭೮೪ ಕಾರ್ಯಕರ್ತೆಯರು ಲಸಿಕಾದಾರರಾಗಿ ಭಾಗವಹಿಸಿದ್ದು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳ್ಲಿ ಪೋಲಿಯೋ ಬೂತ್‌ಗಳನ್ನು ತೆರೆಯಲಾಗಿದೆ ಎಂದರು.