ಕೃಷ್ಣಮೃಗ, ಜಿಂಕೆ ಕೊಂಬುಗಳನ್ನು ಸಾಗಾಟ ಮಾಡಿ ಮಾರಲು ಯತ್ನಿಸುತ್ತಿದ್ದ ಕಂಕನಾಡಿ ಉಜ್ಜೋಡಿ ನಿವಾಸಿ ದಿಲೀಪ್ ಕುಮಾರ್ ಜಿ. (30) ಎಂಬಾತನನ್ನು ಮಂಗಳೂರು ಅರಣ್ಯ ಸಂಚಾರಿ ಪೊಲೀಸ್ ದಳ ಮತ್ತು ಬಂಟ್ವಾಳ ಅರಣ್ಯ ಇಲಾಖಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಸೋಮವಾರ ಮಧ್ಯಾಹ್ನ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಯಿಂದ ಕೃಷ್ಣ ಮೃಗದ ಎರಡು ಕೊಂಬುಗಳು ಹಾಗೂ ಜಿಂಕೆ ಮೃಗದ 4 ಕೊಂಬುಗಳು, ಮತ್ತು 3 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಯಿತು.
ಆರೋಪಿಯೊಂದಿಗೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿ
ಸಿ.ಐ.ಡಿ.ಅರಣ್ಯ ಘಟಕ ಬೆಂಗಳೂರು ಎ.ಡಿ.ಜಿ.ಪಿ ಡಾ. ರವೀಂದ್ರನಾಥನ್, ಸಿ.ಐ.ಡಿ.ಅರಣ್ಯ ಮಡಿಕೇರಿ ಘಟಕದ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಸಿ.ಐ.ಡಿ. ಅರಣ್ಯ ಸಂಚಾರದ ಪಿ.ಎಸ್.ಐ ಪುರುಷೋತ್ತಮ, ಸಿಬ್ಬಂದಿ ಗಳಾದ ಜಗನ್ನಾಥ ಶೆಟ್ಟಿ, ಉದಯ ನಾಯ್ಕ, ಮಹೇಶ್, ದೇವರಾಜ್ , ಪ್ರವೀಣ್ ಸುಂದರ್ ಶೆಟ್ಟಿ ಹಾಗೂ
ಬಂಟ್ವಾಳ ಅರಣ್ಯ ವಲಯಾಧಿಕಾರಿ ಸುರೇಶ್, ಸಿಬ್ಬಂದಿಗಳಾದ ಪ್ರೀತಂ, ವಿನಯ್, ಜಿತೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಜಾಹೀರಾತು
ಬಂಟ್ವಾಳನ್ಯೂಸ್ ಇತರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿರಿ www.bantwalnews.com ಸಂಪಾದಕ: ಹರೀಶ ಮಾಂಬಾಡಿ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಿಂಕೆ, ಕೃಷ್ಣಮೃಗ ಕೊಂಬು ಸಾಗಾಟ – ಆರೋಪಿ ಬಂಧನ"
Be the first to comment on "ಜಿಂಕೆ, ಕೃಷ್ಣಮೃಗ ಕೊಂಬು ಸಾಗಾಟ – ಆರೋಪಿ ಬಂಧನ"