ಮಹಾಯೋಗಿ ವೇಮನರು ಸರಳತೆಯಿಂದ ಬದುಕಿ ಸಂತ ಜೀವನಕ್ಕೆ ಮಾದರಿ ಎನಿಸಿದ್ದರು. ಆದುದರಿಂದಲೆ ವೇಮನರಿಂದ ಉತ್ಕೃಷ್ಟ ಸಾಹಿತ್ಯ ಸೃಷ್ಟಿ ಯಾಯಿತು.ವೇಮನರ ಪದ್ಯಗಳು ಇಂಗ್ಲಿಷ್ ಗೆ ಅನುವಾದಗೊಂಡು ಭಾರತದಲ್ಲಷ್ಟೆ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ಜನಪ್ರಿಯವಾದವು ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಭಾನುವಾರ ಮಹಾಯೋಗಿ ವೇಮನರ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿರಸ್ತೇದಾರ್ ರಾಜೇಶ್ ನಾಯ್ಕ್. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಚುನಾವಣಾ ಶಾಖೆಯ ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್. ತಾಲೂಕು ಕಚೇರಿ ಸಿಬ್ಬಂದಿಗಳು. ಗ್ರಾಮ ಲೆಕ್ಕಾಧಿಕಾರಿಗಳು. ಗ್ರಾಮ ಸಹಾಯಕರು ಹಾಜರಿದ್ದರು.
ತಾಲೂಕು ಆಡಳಿತ ಶಾಖೆಯ ವಿಷಯ ನಿರ್ವಾಹಕ ಸೀತಾರಾಮ ಕಮ್ಮಾಜೆ ಸ್ವಾಗತಿಸಿ ವಂದಿಸಿದರು.
Be the first to comment on "ಬಂಟ್ವಾಳದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ"