2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಬೆಳೆ ದರ್ಶಕ ಮೊಬೈಲ್ ಆಪ್ ಅನ್ನು ಕೃಷಿ ಇಲಾಖೆ ಅಭಿವೃದ್ಧಿಪಡಿಸಿದೆ. ರೈತರಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 30, 2020ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಬೆಳೆ ದರ್ಶಕ ಮೊಬೈಲ್ ಆಪ್ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಬೆಳೆ ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಬಹುದು. ರೈತರು ಲಿಖಿತವಾಗಿಯೂ ರೈತ ಸಂಪರ್ಕ ಕೇಂದ್ರಗಳಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಕ್ಷೇಪಣೆ ವಿವರ: ಬೆಳೆ ಸಮೀಕ್ಷೆ ಮಾಹಿತಿ ಪ್ರಕಾರ, ಯಾವುದೇ ಬೆಳೆ ಮಾಹಿತಿ ಲಭ್ಯವಿಲ್ಲದ ರೈತರು ತಾವು ಬೆಳೆ ಬೆಳೆದಿರುವುದಾಗಿ ಆಕ್ಷೇಪಣೆ ವ್ಯಕ್ತಪಡಿಸಬಹುದು. ಬೆಳೆ ಮಾಹಿತಿ ಪ್ರಕಾರ ಪಾಲು, ಕಟಾವಾದ ಪ್ರದೇಶ ಎಂದು ನಮೂದಿಸಿದ್ದು, ರೈತರು ತಾವು ಬೆಳೆ ಬೆಳೆದಿರುವುದಾಗಿ ಆಕ್ಷೇಪಣೆ ವ್ಯಕ್ತಪಡಿಸಬಹುದು. ಬೆಳೆ ಮಾಹಿತಿ ಸರಿ ಇದ್ದರೂ ಬೆಳೆಯ ವಿಸ್ಗತೀರ್ಣ ಕಡಿಮೆ ನಮೂದಾಗಿದ್ದರೆ, ಆಕ್ಷೇಪಣೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆ 08255-233137 ಸಂಪರ್ಕಿಸಬಹುದು.