ಅಂಬಿಗರ ಚೌಡಯ್ಯರು ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದವರು. ಅವರೊಬ್ಬ ಕೆಚ್ಚೆದೆಯ ಗ್ರಾಮ್ಯ ಮನೋಧರ್ಮದ ವಚನಕಾರರದ್ದರಿಂದ ಅಂದಿನ ಸಮಾಜದ ಅವ್ಯವಸ್ಥೆಗಳನ್ನು ನಿರ್ದಾಕ್ಷಿಣ್ಯವಾಗಿ ತನ್ನ ವಚನಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ತನ್ನ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದರು ಎಂದು ಶಿರಸ್ತೇದಾರ್ ಶ್ರೀಧರ್ ಹೇಳಿದರು. ಈ ಸಂದರ್ಭ ಶಿರಸ್ತೇದಾರ್ ರಾಜೇಶ್ ನಾಯ್ಕ್. ಆಹಾರ ಶಾಖೆಯ ಶಿರಸ್ತೇದಾರ್ ಶ್ರೀನಿವಾಸ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ಚುನಾವಣಾ ಶಾಖೆಯ ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳಸ್ವಾಗತಿಸಿ ವಂದಿಸಿದರು
Be the first to comment on "ಬಂಟ್ವಾಳದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ"