ಅರ್ಜಿ ವಿಲೇವಾರಿ ವಿಳಂಬ ಮಾಡಿದರೆ ಕ್ರಮ – ತಾಪಂ ಇಒ ಎಚ್ಚರಿಕೆ

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

  • ಬಂಟ್ವಾಳ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ

ಜಾಹೀರಾತು

ಸಾರ್ವಜನಿಕರು 9/11 ಸೇರಿದಂತೆ ಹಲವು ಸೌಲಭ್ಯಗಳಿಗೆ ಅರ್ಜಿಗಳನ್ನು ಸಲ್ಲಿಸಿದ ಸಂದರ್ಭ ಅವುಗಳನ್ನು ನಿರ್ದಿಷ್ಟ ದಿನಗಳೊಳಗೆ ವಿಲೇವಾರಿ ಮಾಡುವ ಕುರಿತು ಪಿಡಿಒಗಳಿಗೆ ಸೂಚನೆ ನೀಡಲಾಗುತ್ತಿದ್ದು, ಸ್ಪಂದಿಸದೇ ಇದ್ದರೆ, ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಎಚ್ಚರಿಸಿದ್ದಾರೆ.

ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ಸೇರಿದಂತೆ ಇತರ ತಾಲೂಕುಗಳ ಪಿಡಿಒಗಳು ವಿಳಂಬಗತಿಯಲ್ಲಿ ಕೆಲಸ ಮಾಡುತ್ತಿರುವ ಕುರಿತು ದೂರಿದ ಸಂದರ್ಭ ಉತ್ತರಿಸಿದ ಇಒ, ಪಿಡಿಒ ಗಳಿಗೆ ಇದರ ಬಗ್ಗೆ ತಿಳಿಹೇಳಲಾಗುವುದು ಎಂದರು. ಗ್ರಾಪಂಗಳಲ್ಲಿ ಕೋಟಿಗಟ್ಟಲೆ ಹಣ ಬಳಕೆಯಾಗದೆ ಕೊಳೆಯುತ್ತಿದೆ. ಕಾಮಗಾರಿ ಅನುಷ್ಠಾನ ಕುರಿತು ಪಿಡಿಒಗಳು ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ ಎಂದು ಪ್ರಭು ಹೇಳಿದರು.

ವಿದ್ಯುತ್ ಪರಿವರ್ತಕ ಅಳವಡಿಸಲು ನಿಧಿಯ ಕೊರತೆ, ಗ್ರಾಮ ಮಟ್ಟದಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳು, ಸರ್ವರ್ ಸಮಸ್ಯೆ, ನರೇಗಾದಡಿ ಹಣ  ಬಾರದ ವಿಚಾರ, ರಸ್ತೆ ಅಗಲೀಕರಣ ಸಂದರ್ಭ ಪರಿಹಾರ ಸಹಿತ ಹಲವು ವಿಚಾರಗಳ ಕುರಿತು ತಾಪಂ ಸದಸ್ಯರು ಮತ್ತು ಆಹ್ವಾನಿತ ಗ್ರಾಪಂ ಅಧ್ಯಕ್ಷರು ಪ್ರಸ್ತಾಪಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ಅವರು ಸಲಹೆ ಸೂಚನೆಗಳನ್ನು ನೀಡಿದರು. ತಹಸೀಲ್ದಾರ್ ರಶ್ಮಿ ಎಸ್.ಆರ್, ಪಿಡಬ್ಲ್ಯುಡಿ ಎಇಇ ಷಣ್ಮುಗಂ, ಅರಣ್ಯ ಇಲಾಖೆ ವಲಯಾಧಿಕಾರಿ ಬಿ.ಸುರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಮೆಸ್ಕಾಂ ಎಇಇ ಪ್ರಶಾಂತ್ ಪೈ, ನಾರಾಯಣ ಭಟ್, ಅಕ್ಷರ ದಾಸೋಹದ ನೋಣಯ್ಯ, ಯುವಜನ ಸಬಲೀಕರಣ ಇಲಾಖೆಯ ನವೀನ್, ಪಶುಸಂಗೋಪನಾ ಇಲಾಖೆಯ ಡಾ. ಹೆನ್ರಿ, ಕೃಷಿ ಇಲಾಖೆಯ ನಾರಾಯಣ ಶೆಟ್ಟಿ ಸಹಿತ ಅಧಿಕಾರಿಗಳು ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದರು.

ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು. ಸದಸ್ಯರಾದ ಪ್ರಭಾಕರ ಪ್ರಭು, ಉಸ್ಮಾನ್ ಕರೋಪಾಡಿ, ಎಂ.ಆರ್. ಹೈದರ್, ಯಶವಂತ ಪೊಳಲಿ, ರಮೇಶ್ ಕುಡ್ಮೇರು, ಧನಲಕ್ಷ್ಮೀ ಬಂಗೇರ, ಸಂಜೀವ ಪೂಜಾರಿ, ಮಂಜುಳಾ ಕುಶಲ, ಗೀತಾ ಚಂದ್ರಶೇಖರ್, ನಸೀಮಾ ಬೇಗಂ, ಮಹಾಬಲ ಆಳ್ವ, ಆದಂ ಕುಂಞ, ಶೋಭಾ ರೈ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅರ್ಜಿ ವಿಲೇವಾರಿ ವಿಳಂಬ ಮಾಡಿದರೆ ಕ್ರಮ – ತಾಪಂ ಇಒ ಎಚ್ಚರಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*