ಜನವರಿ 27ರಂದು ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಅಪರಾಹ್ನ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸಮರ್ಥನಾ ಬೃಹತ್ ಸಮಾವೇಶಕ್ಕೆ ಬಂಟ್ವಾಳ ತಾಲೂಕಿನಿಂದ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಮಾವೇಶ ಕೇವಲ ಬಿಜೆಪಿ ಪಕ್ಷಕ್ಕೆ ಸಂಬಂಧಿಸಿದ್ದಲ್ಲ, ಎಲ್ಲ ಸಾರ್ವಜನಿಕರೂ ಇದರಲ್ಲಿ ಭಾಗವಹಿಸಬಹುದು. ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅನುಮಾನಗಳಿಗೆ ಇಲ್ಲಿ ಪರಿಹಾರ ದೊರಕಲಿದೆ ಎಂದರು.
ತಿದ್ದುಪಡಿ ಕಾಯ್ದೆ ವಿರುದ್ಧ ಅಪಪ್ರಚಾರಗಳು ನಡೆಯುತ್ತಿದ್ದು, ಈ ಕುರಿತು ಸರಕಾರಿ ಇಲಾಖಾ ಪ್ರತಿನಿಧಿಗಳಿಗೆ ಕ್ಷೇತ್ರ ಕಾರ್ಯ ನಡೆಸಲು ತೊಂದರೆ ಉಂಟುಮಾಡಿದರೆ, ನೌಕರರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ ಎಂದು ಹೇಳಿದ ಶಾಸಕರು, ಸರಕಾರದ ನಾನಾ ಯೋಜನೆಗಳ ಕುರಿತು ಅಸಹಕಾರ ನೀಡುವಂತೆ ಅಪಪ್ರಚಾರವನ್ನು ವಿರೋಧಿಗಳು ನಡೆಸುತ್ತಿದ್ದರೂ ಜನರಿಗೆ ವಾಸ್ತವ ಏನೆಂಬುದರ ಅರಿವಾಗುತ್ತದೆ ಎಂದು ಹೇಳಿದರು.
, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ , ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್, ಜಿಪಂ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮ್ ದಾಸ ಬಂಟ್ವಾಳ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.
Be the first to comment on "ಮಂಗಳೂರು ಸಮಾವೇಶಕ್ಕೆ ಬಂಟ್ವಾಳದಿಂದ 10 ಸಾವಿರ ಮಂದಿ"