ಮಂಗಳೂರು ಸಮಾವೇಶಕ್ಕೆ ಬಂಟ್ವಾಳದಿಂದ 10 ಸಾವಿರ ಮಂದಿ

ಜನವರಿ 27ರಂದು ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಅಪರಾಹ್ನ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸಮರ್ಥನಾ ಬೃಹತ್ ಸಮಾವೇಶಕ್ಕೆ ಬಂಟ್ವಾಳ ತಾಲೂಕಿನಿಂದ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಮಾವೇಶ ಕೇವಲ ಬಿಜೆಪಿ ಪಕ್ಷಕ್ಕೆ ಸಂಬಂಧಿಸಿದ್ದಲ್ಲ, ಎಲ್ಲ ಸಾರ್ವಜನಿಕರೂ ಇದರಲ್ಲಿ ಭಾಗವಹಿಸಬಹುದು. ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅನುಮಾನಗಳಿಗೆ ಇಲ್ಲಿ ಪರಿಹಾರ ದೊರಕಲಿದೆ ಎಂದರು.

ತಿದ್ದುಪಡಿ ಕಾಯ್ದೆ ವಿರುದ್ಧ ಅಪಪ್ರಚಾರಗಳು ನಡೆಯುತ್ತಿದ್ದು, ಈ ಕುರಿತು ಸರಕಾರಿ ಇಲಾಖಾ ಪ್ರತಿನಿಧಿಗಳಿಗೆ ಕ್ಷೇತ್ರ ಕಾರ್ಯ ನಡೆಸಲು ತೊಂದರೆ ಉಂಟುಮಾಡಿದರೆ, ನೌಕರರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ ಎಂದು ಹೇಳಿದ ಶಾಸಕರು, ಸರಕಾರದ ನಾನಾ ಯೋಜನೆಗಳ ಕುರಿತು ಅಸಹಕಾರ ನೀಡುವಂತೆ ಅಪಪ್ರಚಾರವನ್ನು ವಿರೋಧಿಗಳು ನಡೆಸುತ್ತಿದ್ದರೂ ಜನರಿಗೆ ವಾಸ್ತವ ಏನೆಂಬುದರ ಅರಿವಾಗುತ್ತದೆ ಎಂದು ಹೇಳಿದರು.

, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ , ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್, ಜಿಪಂ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ,  ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮ್ ದಾಸ ಬಂಟ್ವಾಳ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಂಗಳೂರು ಸಮಾವೇಶಕ್ಕೆ ಬಂಟ್ವಾಳದಿಂದ 10 ಸಾವಿರ ಮಂದಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*