ಬಂಟ್ವಾಳ

ಯುವ ನ್ಯಾಯವಾದಿಗಳಲ್ಲಿ ಅಧ್ಯಯನಶೀಲತೆ ಅಗತ್ಯ: ದ.ಕ.ಜಿಲ್ಲಾ ನ್ಯಾಯಾಧೀಶ

ಯುವ ನ್ಯಾಯವಾದಿಗಳು ವೃತ್ತಿಸಂಬಂಧಿ ವಿಚಾರಗಳನ್ನು ಅಪ್ ಡೇಟ್ ಮಾಡಿಕೊಳ್ಳುವ ಮೂಲಕ ಸದಾ ಅಧ್ಯಯನಶೀಲರಾಗಿರುವುದು ಅಗತ್ಯವಾಗಿದೆ ಎಂದು ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ ಹೇಳಿದರು.

www.bantwalnews.com Editor: Harish Mambady

ಜಾಹೀರಾತು

ಕರ್ನಾಟಕ ವಕೀಲರ ಪರಿಷತ್ ಬೆಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಮತ್ತು ವಕೀಲರ ಸಂಘ ಬಂಟ್ವಾಳ ಆಶ್ರಯದಲ್ಲಿ ಶನಿವಾರ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಕಾನೂನು ಕಾರ್ಯಾಗಾರ ಮತ್ತು ಬಂಟ್ವಾಳ ವಕೀಲರ ಸಂಘದ ಕಚೇರಿಯಲ್ಲಿ ಇ-ಲೈಬ್ರರಿ ಉದ್ಘಾಟಿಸಿ ಅವರು ಮಾತನಾಡಿದರು.

E – library ಉದ್ಘಾಟನೆ

ನ್ಯಾಯವಾದಿಗಳ ಅರಿವು ವಿಸ್ತಾರಗೊಳ್ಳಲು ಇರುವ ಕಾರ್ಯಾಗಾರಕ್ಕೆ ಯುವ ನ್ಯಾಯವಾದಿಗಳು ಸಕ್ರಿಯವಾಗಿ ಆಸಕ್ತಿಯಿಂದ ಪಾಲ್ಗೊಳ್ಳುವುದು ಅಗತ್ಯ. ಸಾಮಾಜಿಕ ಬದಲಾವಣೆ, ಉನ್ನತಿಗೆ ವಕೀಲರು ಕೆಲಸ ಮಾಡುವ ಅಗತ್ಯವಿದ್ದು, ವಕೀಲವೃತ್ತಿಯ ಮೂಲಪಾಠಗಳನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಇ – ಲೈಬ್ರರಿ ಉದ್ಘಾಟನೆ

ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ನ್ಯಾಯವಾದಿ ಪದ್ಮಪ್ರಸಾದ್ ಹೆಗ್ಡೆ ಮಾತನಾಡಿ, ವಕೀಲರ ವೃತ್ತಿಕೌಶಲಗಳನ್ನು ವೃದ್ಧಿಸಿಕೊಳ್ಳಲು ಕಾರ್ಯಾಗಾರಗಳು ಅಗತ್ಯ ಎಂದರು.

ಜಾಹೀರಾತು

ಕಾರ್ಯಾಗಾರವನ್ನು ಉದ್ಘಾಟಿಸುತ್ತಿರುವ ಜಿಲ್ಲಾ ನ್ಯಾಯಾಧೀಶರು

ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಜೆಎಂಎಫಸಿ ನ್ಯಾಯಾಧೀಶ ಮಹಮ್ಮದ್ ಇಮ್ತಿಯಾಜ್ ಅಹಮದ್, ಬಂಟ್ವಾಳ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ ಜಿ. ತಿಮ್ಮಾಪುರ, ಹಿರಿಯ ವಕೀಲ ಕೆ.ವಿ.ವಾಸುದೇವ ರಾವ್, ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಹಿರಿಯ ನ್ಯಾಯವಾದಿಗಳಾದ ಅಶ್ವನಿ ಕುಮಾರ್ ರೈ, ಗಣೇಶಾನಂದ ಸೋಮಯಾಜಿ, ಚಂದ್ರಶೇಖರ ಪೂಜಾರಿ, ರಮಾನಂದ ಕಾರಂದೂರು ಉಪಸ್ಥಿತರಿದ್ದರು. ಬಳಿಕ ನಡೆದ ಕಾರ್ಯಾಗಾರದಲ್ಲಿ ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಇಮ್ತಿಯಾಜ್ ಅಹಮದ್, ಹಿರಿಯ ನ್ಯಾಯವಾದಿಗಳಾದ ಕೆ.ವಿ.ವಾಸುದೇವ ರಾವ್, ಎಂ.ವಿ.ಶಂಕರ ಭಟ್, ಎಸ್.ಪಿ.ಚಂಗಪ್ಪ ನಾನಾ ವಿಷಯಗಳ ಕುರಿತು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಸ್ವಾಗತಿಸಿದರು. ಹಿರಿಯ ನ್ಯಾಯವಾದಿ ನರೇಂದ್ರನಾಥ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ