ಬಂಟ್ವಾಳ

ಕಟೀಲು ಬ್ರಹ್ಮಕಲಶೋತ್ಸವ: ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ

www.bantwalnews.com Editor: Harish Mambady

ಜಾಹೀರಾತು

ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಉತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಭಕ್ತರಿಂದ ಹೊರೆಕಾಣಿಕೆ ಮೆರವಣಿಗೆ ಭಾನುವಾರ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಕ್ಷೇತ್ರದವರೆಗೆ ನಡೆಯಿತು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸಮೀಪ ಮೈದಾನದಲ್ಲಿ ಒಟ್ಟು ಸೇರಿ ನಂತರ ಮೆರವಣಿಗೆ ಮೂಲಕ ಶ್ರೀ ಕ್ಷೇತ್ರ ತಲುಪಲಾಯಿತು. ಅನ್ನಪ್ರಸಾದಕ್ಕೆ ಬೇಕಾದ ಮಲೆಬೆನ್ನೂರು, ಟೈಗರ್ ಬ್ರಾಂಡ್ ಬೆಳ್ತಿಗೆ ಅಕ್ಕಿ, ಸಕ್ಕರೆ, ಹೆಸರುಬೇಳೆ, ಕಡ್ಲೆಬೇಳೆ, ಮೆಣಸು, ದಿನಸಿ ಸಾಮಾನು, ತೆಂಗಿನಕಾಯಿ, ಸುವರ್ಣಗೆಡ್ಡೆ, ಕುಂಬಳಕಾಯಿ, ಸಿಹಿಕುಂಬಳಕಾಯಿ, ಸೌತೆ, ಬಾಳೆ ಎಲೆ, ತುಪ್ಪ, ಕರ್ಪೂರ, ಬೆಲ್ಲ, ಅವಲಕ್ಕಿ, ಎಳ್ಳೆಣ್ಣೆ, ನಾಗಮಂಡಲಕ್ಕೆ ಅಗತ್ಯವಿರುವ ಕಂಗಿನ ಹೂ ಪಿಂಗಾರ ಇತ್ಯಾದಿ ವಸ್ತುಗಳು ಇರುವ ಹೊರೆಕಾಣಿಕೆಯನ್ನು ಜೀಪು, ಮಿನಿ ಟೆಂಪೊ ಸಹಿತ ವಾಹನಗಳಲ್ಲಿ ಭಕ್ತರು ಕೊಂಡೊಯ್ದರು.

ಜಾಹೀರಾತು

ದೇವತಾರ್ಚನೆ ನಡೆಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ಹೊರೆಕಾಣಿಕೆ ಮೆರವಣಿಗೆಯ ನೇತೃತ್ವವಹಿಸಿದ್ದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಹೊರೆಕಾಣಿಕೆ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಭುವನೇಶ ಪಚ್ಚಿನಡ್ಕ, ಪ್ರಮುಖರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸದಾನಂದ ಶೆಟ್ಟಿ ರಂಗೋಲಿ, ಎ.ಸಿ.ಭಂಡಾರಿ, ರಾಜೇಶ್ ಎಲ್. ನಾಯಕ್, ತುಂಬೆ ಪ್ರಕಾಶ್ ಶೆಟ್ಟಿ ಶ್ರೀಶೈಲ,  ಸಂಪತ್ ಕುಮಾರ್ ಶೆಟ್ಟಿ ಸರಪಾಡಿ, ಮಾಧವ ಮಾವೆ, ಯಶವಂತ ದೇರಾಜೆ, ಬೇಬಿ ಕುಂದರ್, ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ತಾರಾನಾಥ ಕೊಟ್ಟಾರಿ, ಕಮಲಾಕ್ಷಿ ಪೂಜಾರಿ, ಶ್ರೀಕಾಂತ ಶೆಟ್ಟಿ, ವಿಶ್ವನಾಥ ಗಾಣದಪಡ್ಪು, ಜಗನ್ನಾಥ ಬಂಗೇರ, ಪುಷ್ಪರಾಜ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ  ಸಹಿತ ನಾನಾ ಗಣ್ಯರು ಈ ಸಂದರ್ಭ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯಲ್ಲಿ ಸ್ವಚ್ಛತೆಗೆ ಸಂಬಂಧಿಸಿ ಕಸದ ಬುಟ್ಟಿಯನ್ನು ಹೊತ್ತ ವಾಹನ ಗಮನ ಸೆಳೆಯಿತು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ