ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಪ್ರತಿಯೊಬ್ಬ ನಾಗರಿಕ ಸಕ್ರಿಯವಾಗಿ ಪಾಲ್ಗೊಂಡಾಗ ಜಾಗೃತಿ ಮೂಡುತ್ತದೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಹೇಳಿದರು.
ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರು ಸಂದೇಶ ನೀಡಿ, ನಾವೆಲ್ಲರೂ ಜಾತಿ, ಧರ್ಮದ ಭೇದವನ್ನು ಬಿಟ್ಟು ಕಾನೂನುಬದ್ಧ ರೀತಿಯಲ್ಲಿ ಕರ್ತವ್ಯ ನಿರ್ವಹಣೆಯ ಮೂಲಕ ಮಾದರಿಯಾಗೋಣ ಎಂದರು.
ನಾರ್ಶ ಸರಕಾರಿ ಪ್ರೌಢಶಾಲಾ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ಪ್ರಧಾನ ಭಾಷಣ ಮಾಡಿದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಕ್ಷೇತ್ರ ಶಿಕ್ಷಣಾಕಾರಿ ಜ್ಞಾನೇಶ್ ಎಂ.ಪಿ. ಉಪಸ್ಥಿತರಿದ್ದರು. ಬಂಟ್ವಾಳ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಗಣರಾಜ್ಯೋತ್ಸವ ಪರೇಡ್ ನಡೆಯಿತು.
ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ಆಚಾರ್ ಅವರು ತಹಶೀಲ್ದಾರ್ ಅವರ ವಿನಂತಿಯ ಮೇರೆಗೆ ವೀಲ್‌ಚೇರ್ ಮೂಲಕ ಗಣರಾಜ್ಯೋತ್ಸವಕ್ಕೆ ಆಗಮಿಸಿ ಪೂರ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಅವರನ್ನು ಶಾಸಕರು ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿದರು. ಶಿರಸ್ತೇದಾರ್ ಶ್ರೀಧರ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.