ಪುಂಜಾಲಕಟ್ಟೆ

ವಗ್ಗದಲ್ಲಿ ಕಾಂಗ್ರೆಸ್ ನಿಂದ ಪಂಚಾಯತ್ ಸದಸ್ಯರ ಸಮ್ಮೇಳನ

ವಗ್ಗದಲ್ಲಿ ಪಂಚಾಯತ್ ಸದಸ್ಯರ ಸಮ್ಮೇಳನ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ವಗ್ಗದಲ್ಲಿ ಸರಪಾಡಿ ಜಿಪಂ ಕ್ಷೇತ್ರಕ್ಕೊಳಪಟ್ಟ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಸದಸ್ಯರು ಮತ್ತು ಪರಾಜಿತ ಅಭ್ಯರ್ಥಿಗಳ ಸಮ್ಮೇಳನ ನಡೆಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ರೈ, ಪಂಚಾಯತ್ ಚುನಾವಣೆಗೆ ಪೂರ್ವತಯಾರಿಯನ್ನು ಮಾಡಿಕೊಂಡು ಎಲ್ಲರು ಓಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಬಿಜೆಪಿ ಸರಕಾರದ ವೈಫಲ್ಯತೆಗಳನ್ನು ಜನರಿಗೆ ತಿಳಿಸುವ ಮುಖಾಂತರ ಪಂಚಾಯತ್ ಮಟ್ಟದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸೋಣ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಎಲ್ಲಾ ಪಂಚಾಯತ್ ಗಳನ್ನು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತರುವಲ್ಲಿ ಒಗ್ಗಟಾಗಿ ದುಡಿಯೋಣ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸದ್ಯಸರಾದ ಪದ್ಮಶೇಖರ್ ಜೈನ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ತಾಲೂಕು ಪಂಚಾಯತ್ ಸದ್ಯಸರಾದ ಧನಲಕ್ಷ್ಮಿ ಬಂಗೇರ, ಬೇಬಿ ಕೃಷ್ಣಪ್ಪ, ನಾವೂರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ಚಂದಪ್ಪ ನಾಯ್ಕ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಶ್ರೀಧರ ಪೂಜಾರಿ, ಕಾವಳಮೂಡುರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಪೂಂಜ, ಮುಖಂಡರಾದ ಜಿನರಾಜ ಅರಿಗ, ಮಾಯಿಲಪ್ಪ ಸಾಲಿಯಾನ್, ಸಂಪತ್ ಕುಮಾರ್ ಶೆಟ್ಟಿ, ಡೀಕಯ ಬಂಗೇರ, ಡಾ ಶೇರಾ, ಮಾಣಿಕ್ಯರಾಜ್ ಜೈನ್, ಅಬ್ದುಲ್ ಲತೀಪ್, ಬೆನಡಿಕ್ಟ್ ಡಿಸೋಜ, ಬಿ ಆರ್ ಅಂಚನ್, ವಿಶ್ವನಾಥ್ ಬಿತ್ತ ಹಾಗೂ ಪಂಚಾಯತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಕರ್ಣ ವಂದಿಸಿದರು.

www.bantwalnews.com Editor: Harish Mambady

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts