ಸರ್ಕಾರಿ ಕಚೇರಿ

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.

ಜಾಹೀರಾತು

ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.

   ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ.  ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.

ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ,  ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008.  ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ