ಜಿಲ್ಲಾ ಸುದ್ದಿ

ನಂದಿನಿ ಹಾಲು ಮೊಸರು ದರ ಪರಿಷ್ಕರಣೆ – ಇಲ್ಲಿದೆ ವಿವರ

ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ಮೇವಿನ ಕೊರೆತೆ , ರಾಸುಗಳ ಸಾಕಾಣಿಕೆಗೆ ಬಳಸುವ ಪಶು ಆಹಾರದ ಬೆಲೆ, ಸಾಗಾಣಿಕೆ ಮತ್ತು ಸಂಸ್ಕರಣೆ/ಪ್ಯಾಕಿಣಗ್ ವೆಚ್ಚ ದುಬಾರಿ, ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ ಹಾಗೂ ಹಾಲಿನ ಸಂಗ್ರಹಣೆ ಕಡೆಮೆಯಾಗಿರುವ ನಿಟ್ಟಿನಲ್ಲಿ ಹಾಲಿನ ಉತ್ಪಾದನೆಗೆ ಪ್ರೋತ್ಸಾಹಿಸಲು ನಂದಿನಿ ಹಾಲಿನ ಮಾರುಕಟ್ಟೆ ದರವನ್ನು ಹೆಚ್ಚಿಸಿ, ರೈತರಿಗೆ ಉತ್ತಮ ದರ ನೀಡುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಹಾಗೂ ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ ಆದೇಶದಂತೆ ರಾಜ್ಯಾದಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ಬೆಲೆಯನ್ನು ಪರಿಷ್ಕರಿಸಲಾಗಿದೆ. ಅದರಂತೆ ಫೆಬ್ರವರಿ 1 ರಿಂದ  ಅನ್ವಯವಾಗುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಂದಿನಿ  ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಈ ಕೆಳಕಂಡಂತೆ ಪರಿಷ್ಕಸಲಾಗಿದೆ.

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಂದಿನಿ ಹಾಲು ಮತ್ತು ಮೊಸರನ್ನು ನಂದಿನಿ ಡೀಲರುಗಳು ಗರಿಷ್ಟ ಮಾರಾಟ ದರಕ್ಕೆ ಮೀರದಂತೆ ಮಾರಾಟ ಮಾಡಿ. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ತಿಳಿಸಲಾಗಿದೆ.

ಪರಿಷ್ಕರಿತ ದರದ ವಿವರ ಇಂತಿವೆ:- ನಂದಿನಿ ಟೋನ್ಡ್ ಹಾಲು (500 ಮಿ.ಲೀ) ಹಳೆಯ ದರ ರೂ. 18  ಪರಿಷ್ಕೃತ ದರ ರೂ. 19, ನಂದಿನಿ ಟೋನ್ಡ್ ಹಾಲು (1000 ಮಿ.ಲೀ) ಹಳೆಯ ದರ ರೂ.35, ಪರಿಷ್ಕೃತ ದರ  ರೂ. 37, ನಂದಿನಿ ಹೋಮೊಜಿನೈಸ್ಡ್ ಹಸುವಿನ ಹಾಲು (500 ಮಿ.ಲೀ) ಹಳೆಯ ದರ ರೂ. 20, ಪರಿಷ್ಕೃತ  ರೂ. 21, ನಂದಿನಿ ಟೋನ್ಡ್ ಹಾಲು (6 ಲೀ. ಜಂಬೋ) ಹಳೆಯ ದರ  ರೂ. 234, ಪರಿಷ್ಕೃತ ದರ ರೂ. 249 ರೂ, ಸಂದಿನಿ ಶುಭಂ ಹಾಲು (500 ಮಿ.ಲೀ) ಹಳೆಯ ದರ ರೂ.21   ಪರಿಷ್ಕøತ ದರ ರೂ. 22, ನಂದಿನಿ ಸಮೃದ್ಧಿ ಹಾಲು (500 ಮಿ.ಲೀ) ಹಳೆಯ ದರ ರೂ. 23  ಪರಿಷ್ಕೃತ ದರ ರೂ. 24, ಮೊಸರು (200 ಗ್ರಾಂ) ಹಳೆಯ ದರ ರೂ. 11  ಪರಿಷ್ಕೃತ  ದರ ರೂ. 12 , ಮೊಸರು (415 ಗ್ರಾಂ) ಹಳೆಯ ದರ ರೂ. 20 ರೂ ಪರಿಷ್ಕೃತ ದರ ರೂ. 21 , ಮೊಸರು (1 ಕೆಜಿ) ಹಳೆಯ ದರ ರೂ. 43  ಪರಿಷ್ಕೃತ ದರ ರೂ. 45, ಮೊಸರು (6 ಕೆಜಿ ಜಂಬೋ) ಹಳೆಯ ದರ ರೂ.  252 ಪರಿಷ್ಕೃತ ದರ ರೂ.  267 ಆಗಿದೆ.

 ಒಕ್ಕೂಟದಲ್ಲಿ ಹಳೆಯ ದರಗಳು ಮುದ್ರಿತವಾಗಿರುವ ಪೌಚ್ ಫಿಲಂ ದಾಸ್ತಾನು ಮುಗಿಯುವವರೆಗೆ ಹಳೆಯ ದರಗಳು ಮುದ್ರಿತವಾಗಿರುವ ಪ್ಯಾಕೆಟ್‍ಗಳಲ್ಲಿ ನಂದಿನಿ ಹಾಲು ಮತ್ತು ಮೊಸರುನ್ನು ಪ್ಯಾಕ್ ಮಾಡಿ ಸರಬರಾಜು ಮಾಡಲಾಗುವುದು. ಎಲ್ಲಾ ಗ್ರಾಹಕರು ಹಾಗೂ ನಂದಿನಿ ಹಾಲಿನ ಅಧಿಕೃತ ಡೀಲರುಗಳು ಪರಿಷ್ಕೃತ ದರದಲ್ಲಿಯೇ ವ್ಯವಹರಿಸಿ ಒಕ್ಕೂಟದೊಂದಿಗೆ ಸಹಕರಿಸಲು ದ.ಕ ಜಿಲ್ಲಾ ಹಾಲು ಒಕ್ಕೂಟದ  ಅಧ್ಯಕ್ಷ ರವಿರಾಜ ಹೆಗ್ಡೆ ಇವರ ಪ್ರಕಟಣೆ ತಿಳಿಸಿದೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ