ಮಹಾತ್ಮರ ಸಂದೇಶ ಬದುಕಿನಲ್ಲಿ ಅಳವಡಿಸಿ: ತಹಸೀಲ್ದಾರ್ ರಶ್ಮಿ ಎಸ್.ಆರ್.

ಆದರ್ಶ ಪುರುಷರ ಆಚರಣೆಗಳು ಕೇವಲ ಆಚರಣೆಗೆ ಸೀಮಿತಗೊಳ್ಳದೆ ಪ್ರತಿಯೊಬ್ಬರು ಕೂಡ ಮಹಾತ್ಮರು ನೀಡಿದ ಸಂದೇಶಗಳನ್ನು ಅಳವಡಿಸಿಕೊಂಡು ಬದುಕಿದಾಗಲೇ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಜಾಹೀರಾತು

ಶನಿವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಶ್ರೀ ಸವಿತಾ ಮಹರ್ಷಿ ಹಾಗೂ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ನಂದೊಟ್ಟು ಮಾತನಾಡಿ,  ಹಿಂದುಳಿದ ಸಮಾಜವಾಗಿರುವ ಸವಿತಾ ಸಮಾಜವನ್ನು ಪ್ರವರ್ಗ 1ಕ್ಕೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಹೋರಾಟ ನಡೆಯುತ್ತಿದೆ ಎಂದರು.

ಬಿ.ಸಿ.ರೋಡು ಸವಿತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಮಡಿವಾಳ ಸಮಾಜದ ಸಂಜೀವ, ತಾಲೂಕು ಕಚೇರಿ ಶಿರಸ್ತೇದಾರ್ ರಾಧಾಕೃಷ್ಣ, ಪಾಣೆಮಂಗಳೂರು ಹೋಬಳಿಯ ಉಪತಹಶೀಲ್ದಾರ್ ರಾಜೇಶ್, ಶಿರಸ್ತೇದಾರ್ ರಾಜೇಶ್ ನಾಯ್ಕ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶುಕುಮಾರ್ ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ  ನವೀನ್‌ ಕುಮಾರ್ ಸ್ವಾಗತಿಸಿದರು. ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ ವಂದಿಸಿದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮಹಾತ್ಮರ ಸಂದೇಶ ಬದುಕಿನಲ್ಲಿ ಅಳವಡಿಸಿ: ತಹಸೀಲ್ದಾರ್ ರಶ್ಮಿ ಎಸ್.ಆರ್."

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*