ಬಿ.ಸಿ.ರೋಡಿನ ಆರಾಧನಾ ಫ್ರೆಂಡ್ಸ್ ಸರ್ಕಲ್ ಅವರಿಂದ ಫೆ.2, ಭಾನುವಾರ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಯಕ್ಷಗಾನ ಬಯಲಾಟ, ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯಲಿವೆ.
ರಾತ್ರಿ 8 ಗಂಟೆಗೆ ಸನ್ಮಾನ ಸಮಾರಂಭ ನಡೆಯಲಿದ್ದು, ನಿವೃತ್ತ ಮುಖ್ಯ ಶಿಕ್ಷಕ ನಾಟಿ ಕೃಷ್ಣರಾಜ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತೀಕ್ಷಾ ಪೂಜಾರಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದೇ ವೇಳೆ ಸಂಜೆ 6 ಗಂಟೆಯಿಂದ ಶಶಿಪ್ರಭೆ, ಮಾಯಾ ಮಾರುತೇಯ ಪ್ರಸಂಗವನ್ನು ಹನುಮಗಿರಿ ಮೇಳದ ಸದಸ್ಯರು ಆಡಿ ತೋರಿಸಲಿರುವರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಫೆ.2ರಂದು ಸಂಜೆ ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಯಕ್ಷಗಾನ, ಸನ್ಮಾನ"