ಚೈನಾದಲ್ಲಿ ವೈದ್ಯಶಿಕ್ಷಣ ಕಲಿಯುತ್ತಿದ್ದ ವಿದ್ಯಾರ್ಥಿ ಕಾಸರಗೋಡು ಆಸ್ಪತ್ರೆಗೆ ದಾಖಲು
ಆತಂಕ ಬೇಡ ಎಂದು ಆರೋಗ್ಯ ಇಲಾಖೆ ಹೇಳುತ್ತಿದ್ದರೂ ಚೀನಾ ಸಹಿತ ಹಲವೆಡೆ ವ್ಯಾಪಿಸಿರುವ ಕೊರೋನಾ ವೈರಸ್ ಹೊಂದಿರುವ ಮೂರನೇ ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಅದು ನೆರೆಯ ಕೇರಳದಲ್ಲಿ ಹಾಗೂ ಮೂರನೇ ಪ್ರಕರಣ ಕಾಸರಗೋಡಿನಲ್ಲಿ ಎಂಬುದು ಗಮನಾರ್ಹ ವಿಷಯ.
ಜಾಹೀರಾತು
ಸಾಮಾಜಿಕ ಮಾಧ್ಯಮಗಳ ಮೂಲಕ ವಿಶ್ವದ ಹಲವೆಡೆ ಗಮನ ಸೆಳೆದಿರುವ ಕೊರೋನಾ ವೈರಸ್ ಇರುವ ವ್ಯಕ್ತಿಯೊಬ್ಬ ಕಾಸರಗೋಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನು ಖುದ್ದು ಕೇರಳದ ಸಚಿವೆ ದೃಢಪಡಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದೇಶದಲ್ಲಿ ಕಂಡುಬಂದ ಮೂರನೇ ಪ್ರಕರಣವೂ ಕೇರಳದಲ್ಲಿ ಪತ್ತೆಯಾದಂತಾಗಿದೆ.ಜ.3೦ರಂದು ತ್ರಿಶ್ಯೂರ್‌ನಲ್ಲೂ, ಫೆ. 2ರಂದು ಆಲಪ್ಪುಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಚೈನಾದಿಂದ ಬಂದವರಲ್ಲಿ ಕೊರೊನಾ ಪತ್ತೆಯಾಗಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಕಾಸರಗೋಡು ತಲುಪಿದ ಕೊರೋನಾ ವೈರಸ್"