ನಗ್ರಿಯಲ್ಲಿ ಭಾನುವಾರ ಇನ್ನೋವಾ ಕಾರಿನಲ್ಲಿ ರಕ್ತಸಿಕ್ತ ಶವ ಪತ್ತೆಯಾಗಿತ್ತು
ನಗ್ರಿ ಶಾಂತಿನಗರದ ಗುಡ್ಡೆಯೊಂದರಲ್ಲಿ ಭಾನುವಾರ ಕೇರಳ ಮೂಲದ ಕ್ರಿಮಿನಲ್ ಹಿನ್ನೆಲೆಯ ಮುತಾಸೀಮ್ ಯಾನೆ ಡಾನ್ ತಸ್ಲೀಂ (39) ಎಂಬಾತ ಹತ್ಯೆ ಮಾಡಿದ ಸ್ಥಿತಿಯಲ್ಲಿ ಕಾರೊಂದರಲ್ಲಿ ಪತ್ತೆಯಾಗಿದ್ದು, ಘಟನೆಯ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ.
ಜಾಹೀರಾತು
ಹಲವು ಪ್ರಕರಣಗಳ ಆರೋಪಿಯಾಗಿದ್ದ ತಸ್ಲೀಂ ಮಂಗಳೂರು ಬಂದರು ಠಾಣೆ ವ್ಯಾಪ್ತಿಯ ಜ್ಯುವೆಲ್ಲರಿ ರಾಬರಿ ಪ್ರಕರಣದ ಆರೋಪಿಯಾದ ವೇಳೆ ಆತನನ್ನು ಗುಲ್ಬರ್ಗ ಜೈಲಿಗೆ ಹಾಕಲಾಗಿತ್ತು. ಜನವರಿ 31ರಂದು ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ದೊರೆತು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಆತನನ್ನು ಅಪಹರಣ ಮಾಡಲಾಗಿರುವ ಕುರಿತು ಜೇವರ್ಗಿ ಪೊಲೀಸ್ ಸರ್ಕಲ್ ವ್ಯಾಪ್ತಿಯ ಲ್ಲಿ ಪ್ರಕರಣ ದಾಖಲಾಗಿತ್ತು. ಅದಾಗಿ ಎರಡು ದಿನಗಳ ಬಳಿಕ ಆತನ ಶವ ಬಂಟ್ವಾಳ ತಾಲೂಕಿನ ನಗ್ರಿ ಶಾಂತಿನಗರದಲ್ಲಿ ರಕ್ತಸಿಕ್ತವಾಗಿ ಪತ್ತೆಯಾಗಿದ್ದು, ಹತ್ಯೆ ನಡೆಸಿ, ಇನ್ನೋವಾ ಕಾರಿನ ಹಿಂದಿನ ಸೀಟಿನಲ್ಲಿ ಆತನ ಶವವನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹತ್ಯೆ ಪ್ರಕರಣ – ತನಿಖೆ ತೀವ್ರ"
Be the first to comment on "ಹತ್ಯೆ ಪ್ರಕರಣ – ತನಿಖೆ ತೀವ್ರ"