ಕೊರೊನೊ ಸೋಂಕಿಗೆ ಸಂಬಂಧಿಸಿದಂತೆ ಯಾರು ಕೂಡ ಆತಂಕಪಡಬೇಕಾಗಿಲ್ಲ ಈಗಾಗಲೇ ಜಿಲ್ಲೆಯಲ್ಲಿ ಈಬಗ್ಗೆ ಎಲ್ಲಾ ರೀತಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೋಗ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆ ಸಂಪರ್ಪಕಿಸುವಂತೆ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ಹೇಳಿದ್ದಾರೆ.
ಬಂಟ್ವಾಳ ತಾಪಂನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೋಂಕು ಕುರಿತಾದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಮಾರ್ಚ್ ತಿಂಗಳಿನಿಂದ ಕುಡಿಯುವ ನೀರಿನ ಸ್ಥಾವರ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಮೆಸ್ಕಾಂ ಅಧಿಕಾರಿಗಳಿಗೆ ಇಒ ರಾಜಣ್ಣ ಸೂಚಿಸಿದರು.
ಭಾಗ್ಯ ಜ್ಯೋತಿ, ಕುಟೀರಜ್ಯೋತಿ ಮತ್ತು ಹತ್ತು ಹೆಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್ ಗಳನ್ನು ಹೊಂದಿರುವ ಕೃಷಿಕರ ಅಗತ್ಯ ದಾಖಲೆಗಳನ್ನು ಪಡೆಯುವ ಬಗ್ಗೆ ಗೊಂದಲವುಂಟಾಗಿದ್ದು,ಸಾಕಷ್ಟು ದೂರುಗಳು ಬಂದಿದೆ.ಹಾಗಾಗಿ ಮೆಸ್ಕಾಂ ಸಿಬ್ಬಂದಿಗಳು ರೈತರ ಮನೆಗೆ ಭೇಟಿ ನೀಡುವ ವೇಳೆ ಪೂರ್ವ ಮಾಹಿತಿ ತೆರಳುವಂತೆ ಅಧ್ಯಕ್ಷ ಚಂದ್ರಹಾಸ ಕರ್ಕೇರ ಸೂಚಿಸಿದರು.
Be the first to comment on "ಕೊರೋನಾ – ಬೇಡ ಆತಂಕ, ರೋಗ ಲಕ್ಷಣ ಅನುಮಾನವೇ, ಆರೋಗ್ಯ ಇಲಾಖೆ ಸಂಪರ್ಕಿಸಿ"