ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಸರಕಾರಿ/ಸಾರ್ವಜನಿಕ ಉದ್ಯೋಗಗಳಿಗೆ ಈಗಿರುವ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಅಧ್ಯಕ್ಷತೆಯಲ್ಲಿ ಫೆ.10ರಂದು ಮೈಸೂರಿನಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕಲಾ ಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹುಣಸೂರು ರಸ್ತೆ ಮೈಸೂರು ನಗರ ಇಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಬಂಟ್ವಾಳ ತಾಲೂಕು ವ್ಯಾಪ್ತಿಗೊಳಪಡುವ ಸಂಘಟನೆಗಳ ಮುಖಂಡರು ಅಥವಾ ಸಂಘ ಸಂಸ್ಥೆಗಳು ಮತ್ತು ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಈ ಸಭೆಯಲ್ಲಿ ಭಾಗವಹಿಸಲು ಕೋರಲಾಗಿದೆ.
ಸಮಾಲೋಚನಾ ಸಭೆಯಲ್ಲಿ ಮೌಖಿಕವಾಗಿ ವಿಚಾರ ಅಥವಾ ಅಭಿಪ್ರಾಯಗಳನ್ನು ತಿಳಿಸಬಯಸುವವರು, ಕಾರ್ಯಕ್ರಮ ಪ್ರಾರಂಭವಾಗುವ ಒಂದು ಗಂಟೆ ಮೊದಲು ರಂಗಮಂದಿರದ ಹೊರಗಡೆ, ಅದಕ್ಕಾಗಿ ತೆರೆಯಲಾಗುವ ಕೌಂಟರ್‌ಗಳಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳವುದು. ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ತಿಳಿಸಲು ಅವಕಾಶವಿದೆ.
ವಿಷಯಕ್ಕೆ ಸಂಬಂಧಪಟ್ಟ ಸಂಕ್ಷಿಪ್ತವಾಗಿ ಹೆಚ್ಚು ಸಮಯ ತೆಗೆದುಕೊಳ್ಳದೆ ತಮ್ಮ ಅಭಿಪ್ರಾಯ ಮಂಡಿಸುವುದು. ಸಮಾಲೋಚನಾ ಸಭೆಯಲ್ಲಿ ಸಂಘಟನೆಗಳ ಮುಖಂಡರು ಅಥವಾ ಸಂಘ ಸಂಸ್ಥೆಗಳು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ವಿನಂತಿಸಿದ್ದಾರೆ.
Be the first to comment on "ಪ.ಜಾತಿ, ಪಂಗಡ ಮುಖಂಡರ ಸಮಾಲೋಚನಾ ಸಭೆಗೆ ಆಹ್ವಾನ"