ಸಾಧಕರು

ಐಸ್ ಸ್ಕೇಟಿಂಗ್ ನಲ್ಲಿ‌ ಅಂತರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ

ಮಂಗಳೂರು: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ,ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದ ಮಂಗಳೂರಿನ ಕುಮಾರಿ ಅನಘಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಅವರ ಸ್ವಗೃಹ ಧವಳಗಿರಿಯಲ್ಲಿ ಅಭಿನಂದಿಸಿದರು.

ಜಾಹೀರಾತು

ಕಿರಿಯ ಪ್ರಾಯದಲ್ಲೇ ಐಸ್ ಸ್ಕೇಟಿಂಗ್ ಅನ್ನುವ ಕಷ್ಟಕರ ಕ್ರೀಡೆಯಲ್ಲಿ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದಿರೋದು ಈ ರಾಜ್ಯಕ್ಕೆ ಹೆಮ್ಮೆಯ ವಿಚಾರ,ಮುಂದಿನ ದಿನದಲ್ಲೂ ಈ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ದೇಶಕ್ಕೆ ಹೆಸರು ತರುವಂತೆ ಅವರು ಆಶಿಸಿದರು.

ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಜಾಹೀರಾತು

ಅನಘಾ ಈವರೆಗೆ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 22 ಚಿನ್ನದ ಪದಕ,9 ಬೆಳ್ಳಿ ಹಾಗೂ 6 ಕಂಚಿನ‌ ಪದಕ ಪಡೆದಿದ್ದಾರೆ.

ಮಂಗಳೂರಿನ‌ ಕದ್ರಿ ಹಿಲ್ಸ್ ನಿವಾಸಿ,ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಜಾಹೀರಾತು

ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.

www.bantwalnews.com Editor: Harish Mambady For Advertisements Contact 9448548127

ಜಾಹೀರಾತು

ಸ್ಕೇಟಿಂಗ್ ಪಟು ಅನಾಘಾಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ‌ ನೆಹರೂ ಮೈದಾನದಲ್ಲಿ‌ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ,ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು,ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಅತಿಥಿಗಳು ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್,ಡಾ.ವೈ.ಭರತ್ ಶೆಟ್ಟಿ,ಯು.ಟಿ.ಖಾದರ್,ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ,ಭೋಜೆಗೌಡ, ಜಿ.ಪಂ.ಅಧ್ಯಕ್ಷೆ ಕಸ್ತೂರಿ ಪಂಜ,ತಾ.ಪಂ.ಅಧ್ಯಕ್ಷ ಮೋನು,ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ,ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್,ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಉಪಸ್ಥಿತರಿದ್ದರು. ಮಂಗಳೂರಿನ‌ ಕದ್ರಿ ಹಿಲ್ಸ್ ನಿವಾಸಿ ಸ್ಕೇಟಿಂಗ್ ಪಟು ಅನಘಾ,ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ಕ್ರೀಡೆಯನ್ನು ಆರಂಭಿಸಿದ್ದು ಪ್ರಸ್ತುತ 9 ವರ್ಷ ವಯಸ್ಸಿನಲ್ಲಿ, ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅನಘಾ ಈವರೆಗೆ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 22 ಚಿನ್ನದ ಪದಕ,9 ಬೆಳ್ಳಿ ಹಾಗೂ 6 ಕಂಚಿನ‌ ಪದಕ ಪಡೆದಿದ್ದಾರೆ.ಮಂಗಳೂರಿನ‌ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ