ಸುದ್ದಿಗಳು

ನೇರಳಕಟ್ಟೆ ವ್ಯವಸಾಯಿಕ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಚೌಟ

ನೇರಳಕಟ್ಟೆ ಸಹಕಾರಿ ವ್ಯವಸಾಯಿಕ  ಸಂಘ ನೇರಳಕಟ್ಟೆ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಚೌಟ ಮಾಣಿ ಹಾಗೂ ಉಪಾಧ್ಯಕ್ಷರಾಗಿ ತನಿಯಪ್ಪ ಗೌಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಜಾಹೀರಾತು

ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿ ಬಿ.ವಿ.ಪ್ರತಿಮಾ ಅವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಪೂಜಾರಿ ಸಹಕರಿಸಿದರು.

ನಿರ್ದೇಶಕರಾಗಿ ನಾರಾಯಣ ಶೆಟ್ಟಿ ಮಾಣಿ , ಸನತ್ ರೈ ಅನಂತಾಡಿ, ಪಾಂಡುರಂಗ ವಿ. ಕಾಮತ್ , ರಾಘವ ಪೆರಾಜೆ, ಸಂಕಪ್ಪ ಜೆ. ಅನಂತಾಡಿ, ಸುಧಾಕರ ಪಿ.ಪೆರಾಜೆ, ಶ್ರೀನಿವಾಸ ಪೂಜಾರಿ ಪೆರಾಜೆ, ವೆಂಕಟೇಶ್ ಕೋಟ್ಯಾನ್ ಅನಂತಾಡಿ, ಭಾರತಿ ಮಾಣಿ, ಶಾಲಿನಿ ನೆಟ್ಲಮುಡ್ನೂರು,  ನಿರಂಜನ ರೈ  ನೇಮಕಗೊಂಡಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts