Photo: Kartik Studio, B.C.Road
ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ಜಾತ್ರೋತ್ಸವ ನಡೆಯುತ್ತಿದ್ದು, ಬುಧವಾರ ರಥೋತ್ಸವ ಹಿನ್ನೆಲೆಯಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಮಧ್ಯಾಹ್ನ ದೇವರ ರಥಾರೋಹಣ ಕಾರ್ಯ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮತ್ತು ಊರ, ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.