ಕರಿಯಂಗಳ ಪ್ರದೇಶದಲ್ಲಿ ಮರಳುಗಾರಿಕೆ ಅಕ್ರಮವಾಗಿ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಕಂದಾಯ ಹಾಗೂ ಗಣಿ ಮತ್ತು ಪೊಲೀಸ್ ಇಲಾಖೆಗಳ ತಂಡ ಬುಧವಾರ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಬೋಟ್, ಲಾರಿ ಮತ್ತು ಹಿಟಾಚಿಗಳನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಂಡು ಗಣಿ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ. ಈ ವೇಳೆ ಅಲ್ಲಿ ಕಾರ್ಮಿಕರು ಪರಾರಿಯಾಗಿದ್ದು, 11 ಬೋಟುಗಳು, 6 ಲಾರಿಗಳು ಮತ್ತು ಒಂದು ಹಿಟಾಚಿ ಯಂತ್ರವನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಗಣಿ ಇಲಾಖೆಯವರು ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.