ಸಿಪಿಐ ಮುಂದಾಳು, ಬಂಟ್ವಾಳ ಪುರಸಭೆ ಮಾಜಿ ಸದಸ್ಯೆ ಯಮುನಾ ನಿಧನ

ಬಂಟ್ವಾಳದ ದಿ.ಈಶ್ವರ ಕರಂಬೇರ ಅವರ ಪತ್ನಿ, ಸತತ ಎರಡು ಅವಧಿಯಲ್ಲಿ ಬಂಟ್ವಾಳ ಪುರಸಭೆಗೆ ಸಿಪಿಐ ನಿಂದ  ಪ್ರತಿನಿಸಿದ್ದ ಮಾಜಿ ಸದಸ್ಯೆ ಬಿ.ಯಮುನಾ (75) ಅಲ್ಪಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಇಬ್ಬರು ಪುತ್ರರನ್ನು ಅವರು ಹೊಂದಿದ್ದರು. ಕೌನ್ಸಿಲರ್ ಆಗಿದ್ದ ಸಂಧರ್ಭ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಬೀಡಿ ಕಾರ್ಮಿಕರ ಚಳುವಳಿ, ರೈತರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಸಂತಾಪ ವ್ಯಕ್ತಪಡಿಸಿದ್ದಾರೆ  ಸಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್, ಸಹ ಕಾರ್ಯದರ್ಶಿ ಸುರೇಶ್ ಕುಮಾರ್, ಜಿಲ್ಲಾ ಸಹ ಕಾರ್ಯದರ್ಶಿ ವಿ.ಎಸ್ ಬೇರಿಂಜ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ರಾವ್, ಕರುಣಾಕರ್, ಪಿ.ವಿಠಲ ಬಂಗೇರ, ಪ್ರೇಮನಾಥ ಕೆ. ಮಾಜೀ ಉಸ್ತುವಾರಿ ಸಚಿವ ರಮನಾಥ ರೈ, ಚಂದ್ರ ಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಉದ್ಯಮಿ  ಸೇಸಪ್ಪ ಕೋಟ್ಯಾನ್, ಐತಪ್ಪ ಆಳ್ವ ಅಂತಿಮ ದರ್ಶನ ಪಡೆದು ಸಂತಾಪ ಸಲ್ಲಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿಪಿಐ ಮುಂದಾಳು, ಬಂಟ್ವಾಳ ಪುರಸಭೆ ಮಾಜಿ ಸದಸ್ಯೆ ಯಮುನಾ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*