www.bantwalnews.com Updated news
ಮದುವೆ ಮುಗಿಸಿ ಮರಳುತ್ತಿದ್ದ ತಂಡ ಇದ್ದ ಬಸ್, ಎದುರು ಚಲಿಸುತ್ತಿದ್ದ ಸರ್ವೀಸ್ ಬಸ್ಸಿಗೆ ಬಂಟ್ವಾಳ ತಾಲೂಕಿನ ಕಲ್ಪನೆ ಎಂಬಲ್ಲಿ ಭಾನುವಾರ ಮಧ್ಯಾಹ್ನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಪ್ರಯಾಣಿಕ ಬಜ್ಪೆಯ ಮೋಹನ್ ಸಿಂಗ್ ತೀವ್ರ ಸ್ವರೂಪದ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡೂ ಬಸ್ಸುಗಳಲ್ಲಿ ಸುಮಾರು 60ರಷ್ಟು ಪ್ರಯಾಣಿಕರು ಇದ್ದರು ಎಂದು ಹೇಳಲಾಗುತ್ತಿದ್ದು, ಇವರಲ್ಲಿ 50ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
19 ಮಂದಿ ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆ, 15 ಮಂದಿ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆ, 12 ಮಂದಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 7 ಮಂದಿ ಬಿ.ಸಿ.ರೋಡಿನ ಸೋಮಯಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Be the first to comment on "ಮದ್ವೆ ಬಸ್, ಸರ್ವೀಸ್ ಬಸ್ಸಿಗೆ ಡಿಕ್ಕಿ ಹೊಡೆದ ಪ್ರಕರಣ: ಓರ್ವ ಗಂಭೀರ"