ಬಂಟ್ವಾಳ ತಾಲೂಕಿನ ಶಂಭೂರು ಸಮೀಪದ ಬೊಂಡಾಲದಲ್ಲಿ ನಡೆಯುವ ಕಟೀಲು ಮೇಳದ ಯಕ್ಷಗಾನ ವೇದಿಕೆಯಲ್ಲಿ ಫೆಬ್ರವರಿ 21ರಂದು ರಾತ್ರಿ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
20ರಂದು ತುಳಸೀ ಜಲಂಧರ-ಮೀನಾಕ್ಷಿ ಕಲ್ಯಾಣ ಪ್ರಸಂಗ ಮತ್ತು 21ರಂದು ಶ್ರೀದೇವಿ ಮಹಾತ್ಮೆ ಕಥಾಭಾಗಗಳನ್ನು ಕಟೀಲು ಮೇಳದವರು ಬೊಂಡಾಲದಲ್ಲಿ ಆಡಿತೋರಿಸಲಿದ್ದು, 21ರಂದು ರಾತ್ರಿ 10.30ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ವಹಿಸಲಿದ್ದು, ಕಟೀಲು ಅನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಆಶೀರ್ಚನ ನೀಡಲಿರುವರು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರಿನ ಲೆಕ್ಕಪರಿಶೋಧಕ ಬಿ.ಶಿವಾನಂದ ಪೈ ಭಾಗವಹಿಸುವರು. ಬೊಂಡಾಲ ಸೀತಾರಾಮ ಶೆಟ್ಟಿ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಬೊಂಡಾಲ ಸಚ್ಚಿದಾನಂದ ಶೆಟ್ಟಿ ಮತ್ತು ಶಂಭೂರು ದುರ್ಗಾಪರಮೇಶ್ವರಿ ಬಯಲಾಟ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ ತಾಲೂಕಿನಲ್ಲಿ ಜನಪ್ರಿಯ ಶಿಕ್ಷಕರಾಗಿ, ಊರಿನ ಪಟೇಲರಾಗಿ ಪ್ರಸಿದ್ಧರಾಗಿದ್ದ ಬೊಂಡಾಲ ಜನಾರ್ದನ ಶೆಟ್ಟಿ ಅವರು ಹಳೆಯ ತಲೆಮಾರಿನ ನುರಿತ ಯಕ್ಷಗಾನ ಅರ್ಥಧಾರಿಗಳು. ಕೆ.ಪಿ.ವೆಂಕಪ್ಪ ಶೆಟ್ಟಿ, ನಾರಾಯಣ ಕಿಲ್ಲೆ, ಪೊಳಲಿ ಶಾಸ್ತ್ರಿ ,ಶೇಣಿ ಗೋಪಾಲಕೃಷ್ಣ ಭಟ್ ಮೊದಲಾದ ತಾಳಮದ್ದಳೆ ದಿಗ್ಗಜರ ಸಾಲಿನಲ್ಲಿ ಅರ್ಥ ಹೇಳುತ್ತಿದ್ದ ಅವರಿಗೆ ಯಕ್ಷಗಾನದ ಸಂಜಯ ಎಂದೇ ಹೆಸರು; ಕಾರಣ ಕೃಷ್ಣ ಸಂಧಾನದ ಅವರ ಸಂಜಯನ ಪಾತ್ರಕ್ಕೆ ಆ ಕಾಲದಲ್ಲಿ ಸರಿಗಟ್ಟುವವರೇ ಇಲ್ಲವಾಗಿತ್ತು. ಅವರ ಪುತ್ರ ಬೊಂಡಾಲ ರಾಮಣ್ಣ ಶೆಟ್ಟರು ಭೂಮಾಪನ ಅಧಿಕಾರಿಯಾಗಿ, ಯಕ್ಷಗಾನದ ಸಂಘಟಕ – ವೇ಼ಷಧಾರಿಯಾಗಿ ಜನಪ್ರಿಯರು. ಪ್ರಸ್ತುತ ಕೀರ್ತಿಶೇಷರಾಗಿರುವ ಈ ಇಬ್ಬರ ಹೆಸರಿನಲ್ಲಿ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ನೀಡುವ ಬೊಂಡಾಲ ಪ್ರಶಸ್ತಿಗೆ 2020 ನೇ ಸಾಲಿನಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಹಿರಿಯ ವೇಷಧಾರಿ ರವಿರಾಜ ಪನೆಯಾಲ ಮತ್ತು ಹಿಮ್ಮೇಳ ವಾದಕ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಕಟೀಲು ಮೇಳದಲ್ಲಿ ಸೇವೆಗೈದ ಕಲಾವಿದರಿಗಾಗಿಯೇ ಕಳೆದ ಒಂಭತ್ತು ವರ್ಷಗಳಿಂದ ನೀಡಲಾಗುತ್ತಿರುವ ಬೊಂಡಾಲ ಪ್ರಶಸ್ತಿಯನ್ನು ಫೆ.21ರಂದು ಬಂಟ್ವಾಳ ಶಂಭೂರು ಗ್ರಾಮದ ಬೊಂಡಾಲದಲ್ಲಿ ಜರಗುವ ಕಟೀಲು ಮೇಳದ ಬಯಲಾಟದ ರಂಗಸ್ಥಳದಲ್ಲಿ ಪ್ರದಾನಿಸಲಾಗುವುದು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.
Be the first to comment on "ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ, ರವಿರಾಜ ಪನೆಯಾಲ ಅವರಿಗೆ ಬೊಂಡಾಲ ಪ್ರಶಸ್ತಿ"