ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಣಿ ಜಿಪಂ ಕ್ಷೇತ್ರಕ್ಕೊಳಪಟ್ಟ ಕಾಂಗ್ರೆಸ್ ಪಕ್ಷ ಪಂಚಾಯಿತಿ ಸದಸ್ಯರು, ಪರಾಜಿತ ಅಭ್ಯರ್ಥಿಗಳ ಪಂಚಾಯಿತಿ ಸಮ್ಮಿಲನ ನಡೆಯಿತು.
ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ, ಶೋಭಾ ರೈ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಮಾಣಿ ವಲಯ ಅಧ್ಯಕ್ಷರಾದ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.