ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ (ರಿ) ತಾಲೂಕಿನಸುಜ್ಞಾನನಿಧಿ ಶಿಷ್ಯವೇತನ ವಿತರಣಾಕಾರ್ಯಕ್ರಮವು ಬಂಟ್ವಾಳ ಯೋಜನಾ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ ಉದ್ಘಾಟಿಸಿದರು.
ಯೋಜನೆಯ ಪಾಲುದಾರ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿ/ ತಾಂತ್ರಿಕ ಶಿಕ್ಷಣಕ್ಕೆ ನೆರವು ನೀಡುವಯೋಜನೆಯಿದು. ಬಂಟ್ವಾಳ ತಾಲೂಕಿನಲ್ಲಿ ೨೦೧೯-೨೦ ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಆಯ್ಕೆಯಾದ ೫೬ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಒಟ್ಟುರೂ. ೩೦೨೦೦ ರೂ ಮೊತ್ತ ನೀಡಲಾಗುತ್ತಿದೆ. ಪ್ರಸ್ತುತ ತಿಂಗಳು ಒಟ್ಟು ೨೧೧ ವಿದ್ಯಾರ್ಥಿಗಳಿಗೆ ಒಟ್ಟು ರೂ.೧.೭೭ ಲಕ್ಷ ಮೊತ್ತ ವಿತರಣೆ ಮಾಡಲಾಗಿದೆ. ವಾರ್ಷಿಕವಾಗಿ ಒಟ್ಟು ರೂ.೧೧.೩೬ ಲಕ್ಷ ವಿತರಣೆ ಮಾಡಲಾಗುತ್ತಿದೆ ಎಂದು ಈ ಸಂದರ್ಭ ಯೋಜನಾಧಿಕಾರಿ ಜಯಾನಂದ ತಿಳಿಸಿದರು.
ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕಿನ ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಮಾಧವ ವಳವೂರು ವಹಿಸಿದ್ದರು. ಜನಜಾಗೃತಿ ವೇದಿಕೆ ಅಧ್ಯಕ್ಷ ಕೊಡಾಜೆ ಬಾಲಕೃಷ್ಣ ಆಳ್ವ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಪ್ರಥಮ ಹಂತದಲ್ಲಿಆಯ್ಕೆಯಾದ ೫೬ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127
Be the first to comment on "ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ"